ಬ್ಯಾಡಗಿ ಮುಖ್ಯ ರಸ್ತೆ ಅಗಲೀಕರಣದ ಪ್ರತಿಭಟನೆಗೆ ಕಾಂಗ್ರೆಸ್ ಸಾಥ್
Congress joins protest against widening of Byadgi main road
ಬ್ಯಾಡಗಿ ಮುಖ್ಯ ರಸ್ತೆ ಅಗಲೀಕರಣದ ಪ್ರತಿಭಟನೆಗೆ ಕಾಂಗ್ರೆಸ್ ಸಾಥ್
ಬ್ಯಾಡಗಿ 03 : ಮುಖ್ಯ ರಸ್ತೆ ಅಗಲೀಕರಣ ಹೋರಾಟ ಸಮಿತಿ ಕೈಗೊಂಡಿರುವ ರಸ್ತೆ ಅಗಲೀಕರಣದ ಪ್ರತಿಭಟನೆಗೆ ತಾಲೂಕಾ ಕಾಂಗ್ರೇಸ್ ಪಕ್ಷವು ಸಾಥ್ ನೀಡಲಿದೆ ಎಂದು ತಾಲೂಕಾ ಕಾಂಗ್ರೇಸ್ ಪಕ್ಷದ ಅಧ್ಯಕ್ಷ ದಾನಪ್ಪ ಚೂರಿ ಹೇಳಿದರು.ಸೋಮವಾರ ಅವರು ಪಟ್ಟಣದ ತಾಲೂಕಾ ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಎಲ್ಲರಿಗೂ ರಸ್ತೆ ಅಗಲೀಕರಣದ ಅವಶ್ಯಕತೆಯಿದೆ. ಈ ಪ್ರತಿಭಟನೆಗೆ ಪಕ್ಷಾತೀತವಾಗಿ ಬೆಂಬಲ ನೀಡಬೇಕಿದೆ. ಇದರಲ್ಲಿ ಯಾರೊಬ್ಬರೂ ಕ್ರೇಡಿಟ್ ಅಡಗಿಲ್ಲ, ಅದರ ಬದಲಾಗಿ ಪಟ್ಟಣ ಸೇರಿದಂತೆ ತಾಲೂಕಿನ ಜನರು ಪಟ್ಟಣದ ಮುಖ್ಯ ರಸ್ತೆಯಲ್ಲಿ ಆಗುತ್ತಿರುವ ಅವಘಡಗಳಿಗೆ ಹಾಗೂ ಅಪಘಾತಗಳಿಗೆ ಶಾಸ್ವತ ಪರಿಹಾರ ದೊರೆಯಲಿದ್ದು, ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆಂದರು. ಪಕ್ಷದ ಪ್ರಧಾನ ಕಾರ್ಯದರ್ಶಿ ರಮೇಶ್ ಸುತ್ತಕೋಟಿ ಮಾತನಾಡಿ ಈ ಪ್ರತಿಭಟನೆಯಲ್ಲಿ ಶಾಸಕ ಬಸವರಾಜ ಶಿವಣ್ಣನವರ ಸೇರಿದಂತೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಈಗಾಗಲೇ ತಾಲೂಕಿನ ಕಾಂಗ್ರೇಸ್ ಕಾರ್ಯಕರ್ತರೊಂದಿಗೆ ಚರ್ಚಿಸಲಾಗಿದ್ದು ಪ್ರತಿಭಟನೆಯಲ್ಲಿ ಹೆಚ್ಚಿನ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆಂದರು. ಈ ಸಂದರ್ಭದಲ್ಲಿ ಪಟ್ಟಣದ ಆಶ್ರಯ ಸಮಿತಿ ಅಧ್ಯಕ್ಷ ಅಬ್ದುಲ್ ಮುನಾಫ್ ಎರೇಸಿಮಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಶಂಭಣ್ಣ ಪಾಟೀಲ, ಕಾಂಗ್ರೇಸ್ ಪಕ್ಷದ ಧುರೀಣರಾದ ಮಾರುತಿ ಅಚ್ಚಿಗೇರಿ, ಬಾಷಾಸಾಬ ದೊಡ್ಡಮನಿ, ಬಾಬುಸಾಬ ಓಲೇಕಾರ, ಸೋಮಣ್ಣ ಸಂಕಣ್ಣನವರ, ದುರ್ಗೇಶ ಗೊಣೆಮ್ಮನವರ, ಶಂಕರ ಕುಸಗೂರ, ಗೀರೀಶ ಇಂಡಿಮಠ, ಹಕೀಮ್ ಮಂಜೂರಲಿ, ನಜೀರ್ ಅಹ್ಮದ್ ಶೇಖ್, ರಫಿಕ್ ಮುದಗಲ್ ಜೈಭೀಮ ಸೇರಿದಂತೆ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 