ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡುವಂತೆ ಗ್ಯಾರಂಟಿ ಸಮಿತಿ ಸದಸ್ಯೆ ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಮನವಿ

ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡುವಂತೆ ಗ್ಯಾರಂಟಿ ಸಮಿತಿ ಸದಸ್ಯೆ ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಮನವಿ  

ಕೊಪ್ಪಳ 19 : ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದ ಹಕ್ಕಿ ಪಿಕ್ಕಿ ಸಮುದಾಯಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡುವಂತೆ ಗ್ಯಾರಂಟಿ ಸಮಿತಿ ಸದಸ್ಯೆ ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಮನವಿ ಸಲ್ಲಿಸಿದರು.ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ನಿಮಿತ್ಯ ಆಗಮಿಸಿದ್ದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಲೆಮಾರಿ ಅರೆ ಅಲೆಮಾರಿ ಅಭೆವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರನ್ನು ಸನ್ಮಾನಿಸಿ ಹಕ್ಕಿ ಪಿಕ್ಕಿ ಸಮುದಾಯದ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು. ಈ ಹಿಂದೆ ಅವರು ಮೂಢನಂಬಿಕೆಗೆ ಒಳಗಾಗಿ ಮಾಡಿಕೊಂಡ ಸಮಸ್ಯೆಗಳು ಮತ್ತು ಅದಕ್ಕೆ ಸ್ಪಂದಿಸಿ ಕೈಗೊಂಡ ಕಾರ್ಯಗಳು ಹಾಗೂ ಅಲ್ಲಿ ಈಗಲೂ ಆಗಬೇಕಿರುವ ವ್ಯವಸ್ಥೆ ಕುರಿತು ಮನವರಿಕೆ ಮಾಡಿಕೊಟ್ಟರು. ವಿಶೇಷವಾಗಿ ಅವರಿಗೆ ಮನೆ ಮತ್ತು ಮೂಲಭೂತ ಸೌಕರ್ಯಗಳ ಜೊತೆಗೆ ಶಿಕ್ಷಣ ಉದ್ಯೋಗಕ್ಕೆ ದಾರಿಮಾಡಿಕೊಟ್ಟರೆ ಅವರೂ ಸಹ ಮುಖ್ಯವಾಹಿಸನಿಯಲ್ಲಿ ಸೇರಲು ಅವಕಾಶ ಸಿಗುತ್ತದೆ ಎಂಬುದನ್ನು ವಿವರಿಸಿದರು.ಮನವಿ ಸ್ವೀಕರಿಸಿದ ಅಧ್ಯಕ್ಷರು ಪರೀಶೀಲಿಸಿ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಇಟ್ಟಂಗಿ, ಕಾಂಗ್ರೆಸ್ ಎಸ್‌. ಟಿ. ಘಟಕ ಅಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಮುಖಂಡರಾದ ಮಹಿಳಾ ತಾಲೂಕ ಅಧ್ಯಕ್ಷೆ ರೇಷ್ಮಾ ಖಾಜಾವಲಿ, ಸುಮಂಗಲಾ ನಾಯಕ, ಸೌಭಾಗ್ಯ, ರೇಖಾ ಇತರರು ಇದ್ದರು.