ನವದೆಹಲಿ, ಜನವರಿ 20, ಹರಿಯಾಣದ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಶಮ್ಶರ್ ಸಿಂಗ್ ಸುರ್ಜೆವಾಲಾ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಸೋಮವಾರ ನಿಧನ ಹೊಂದಿದರು. ಅವರಿಗೆ 87 ವರ್ಷವಯಸ್ಸಾಗಿತ್ತು, ಶಮ್ಶರ್ ಹರಿಯಾಣದಲ್ಲಿ ವಿರೋಧ ಪಕ್ಷದ ನಾಯಕರಾಗಿಯೂ ಕೆಲಸ ಮಾಡಿದ್ದರು. ರಾಜ್ಯದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೆ, ಅವರು ಕೆಲ ಕಾಲ ರಾಜ್ಯಸಭಾ ಸದಸ್ಯರಾಗಿದ್ದರು.ಅಖಿಲ ಭಾರತ ಕಿಸಾನ್ ಕಾಂಗ್ರೆಸ್ ಮಾಜಿ ಅಧ್ಯಕ್ಷರೂ ಆಗಿದ್ ಅವರು, ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ ಅವರ ತಂದೆ. ಐದು ಬಾರಿ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಸೋಮವಾರವೇ ನರ್ವಾನಾದಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದೂ ಕುಟುಂಬದ ಮೂಲಗಳು ಹೇಳಿವೆ.