ಗಜಾನನ ಮಂಗಸೂಳಿಗೆ ಸೂಕ್ತ ಸ್ಥಾನಮಾನ ನೀಡಲು ಕಾಂಗ್ರೆಸ್ ಮುಖಂಡರ ಆಗ್ರಹ
Congress leaders urge for appropriate recognition for Gajanana Mangasuli
ಅಥಣಿ 25: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಹಲವು ದಶಕಗಳಿಂದ ಪಕ್ಷ ಸಂಘಟನೆಗೆ ಶ್ರಮಿಸುತ್ತಿರುವ ಗಜಾನನ ಮಂಗಸೂಳಿ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ಅಥವಾ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ನ ಅಥಣಿ ಬ್ಲಾಕ್ ಅಧ್ಯಕ್ಷ ಸಿದ್ಧಾರ್ಥ ಸಿಂಗೆ ಹಾಗೂ ಪಕ್ಷದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಜಾನನ ಮಂಗಸೂಳಿ ಅವರಿಗೆ ಸೂಕ್ತ ಸ್ಥಾನಮಾನ ನೀಡುವುದರಿಂದ ಅಥಣಿ ಭಾಗದಲ್ಲಿ ಕಾಂಗ್ರೆಸ್ ಇನ್ನಷ್ಟು ಬಲಿಷ್ಠವಾಗಲಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಹಾಗೂ ಹಿರಿಯ ನಾಯಕರಿಗೆ ಸೂಕ್ತ ಗೌರವ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗಜಾನನ ಮಂಗಸೂಳಿ, ನೀಟ್ ಅಕ್ರಮ ಪ್ರಕರಣವನ್ನು ಖಂಡಿಸಿ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೈಗೊಂಡಿರುವ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು. ನೀಟ್ ಅಕ್ರಮದಿಂದ ವೈದ್ಯಕೀಯ ಶಿಕ್ಷಣದ ಕನಸು ಕಂಡ ಸಾವಿರಾರು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಹಾಗೂ ಅವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಶೇ.81.67ರಷ್ಟು ಪೂರ್ಣಗೊಂಡಿದೆ. ಈಗಾಗಲೇ 1,99,182 ಮತದಾರರು ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಿದ್ದು, ಇನ್ನೂ ಸುಮಾರು 15,600 ಮತದಾರರು ಅರ್ಜಿ ಸಲ್ಲಿಸಿಲ್ಲ. ಆಗಸ್ಟ್ 8ರೊಳಗೆ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಈ ವೇಳೆ ಮಹೇಶವಾಡಗಿ ಸೇತುವೆ ಕಾಮಗಾರಿಗೆ 2 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಸೇತುವೆ ನಿರ್ಮಾಣದಿಂದ ಮಹೇಶವಾಡಗಿ, ರಬಕವಿ, ಬನಹಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಸಂಚಾರ ಸುಲಭವಾಗಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾವಸಾಹೇಬ ಐಹೊಳೆ, ಅಸ್ಲಾಂ ನಾಲಬಂಧ, ಸೈಯ್ಯದ ಅಮೀನ್ ಗದ್ಯಾಳ, ಬಸವರಾಜ ಬುಟಾಳಿ, ಶಿವಾನಂದ ಸೌದಾಗರ, ರಿಯಾಜ್ ಸನದಿ, ಉದಯ ಸೋಳಸಿ, ಪ್ರಮೋದ ಪಾಟೀಲ, ಆಶಾ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ 