ಯತೀಂದ್ರ ಸಿದ್ದರಾಮಯ್ಯಗೆ ಸ್ವಾಗತ ಕೋರಿದ ಕಾಂಗ್ರೆಸ್ ಮುಖಂಡರು

ಯತೀಂದ್ರ ಸಿದ್ದರಾಮಯ್ಯಗೆ ಸ್ವಾಗತ ಕೋರಿದ ಕಾಂಗ್ರೆಸ್ ಮುಖಂಡರು  Congress leaders welcomed Yathindra Siddaramaiah

ಬಳ್ಳಾರಿ 30: ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಭಾನುವಾರ ಬಳ್ಳಾರಿ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ತೋರಣಗಲ್ಲಿನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಜನಪ್ರತಿನಿಧಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಭಾನುವಾರ ಬೆಳಿಗ್ಗೆ 11 ಗಂಟೆಗೆ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಬಳ್ಳಾರಿ ಲೋಕಸಭಾ ಸದಸ್ಯ ಇ. ತುಕಾರಾಂ, ಬುಡಾ ಅಧ್ಯಕ್ಷ ಜೆ.ಎಸ್‌. ಆಂಜನೇಯುಲು, ಬಳ್ಳಾರಿ ಮಹಾಪೌರ ಪಿ. ಗಾದೆಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಎಸ್‌.ಎಲ್‌. ಸ್ವಾಮಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಬೋಯಪಾಟಿ ವಿಷ್ಣುವರ್ಧನ, ನಗರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ. ಶ್ರೀನಿವಾಸುಲು, ಬಳ್ಳಾರಿ ಮಹಾನಗರ ಪಾಲಿಕೆ ಸದಸ್ಯರಾದ ಕುಬೇರ್, ವಿಕ್ಕಿ, ಮಲ್ಲೇಶಪ್ಪ, ರಘು, ಪ್ರತಾಪ್, ಸತ್ಯಪ್ಪ, ಕಿಶೋರ್ ಹಾಗೂ ಪಾಲಿಕೆ ಆಯುಕ್ತ ಮಂಜುನಾಥ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.