ಪಕ್ಷಕ್ಕೆ ಸೆಡ್ಡು ಹೊಡೆದ ಕಾಂಗ್ರೆಸ್ ಶಾಸಕಿ ಅದಿತಿ ಸಿಂಗ್

ರಾಯಬರೇಲಿ, ಅ 3:   ಉತ್ತರ ಪ್ರದೇಶ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಬಹಿಷ್ಕರಿಸುವಂತೆ ಕಾಂಗ್ರೆಸ್ ಪಕ್ಷ ನೀಡಿದ್ದ ಆದೇಶವನ್ನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ರಾಯಬರೇಲಿ (ದಕ್ಷಿಣ) ಕ್ಷೇತ್ರದ ಶಾಸಕಿ ಅದಿತಿ ಸಿಂಗ್ ತಿರಸ್ಕರಿಸಿ, ಬಹಳ ಮುಜುಗರ ಉಂಟು ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಒಂದು ತೀವ್ರ ಹಿನ್ನಡೆ, ಮುಖಭಂಗವಾಗಿದೆ. ರಾಜಕೀಯವನ್ನು ಮೀರಿ ಚರ್ಚೆಯಲ್ಲಿ ಭಾಗವಹಿಸುವುದಾಗಿ ಅದಿತಿ ಸಿಂಗ್ ಹೇಳಿದ್ದಾರೆ.    ರಾಯಬರೇಲಿ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿರುವ ಕಾರಣ ಅವರ ನಡೆ ರಾಜಕೀಯವಾಗಿ ಪಕ್ಷಕ್ಕೆ ಬಹಳ ಮುಜುಗರ ತಂದಿದೆ.    ಅಭಿವೃದ್ಧಿ ಕಾರ್ಯಗಳು ಪಕ್ಷ ರಾಜಕೀಯವನ್ನು ಮೀರಿದ್ದು ಎಂದು  ಹೇಳುತ್ತಲೇ ಬಂದಿದ್ದೇನೆ. ನನಗೆ ಸರಿ ಎನಿಸಿದ ಹಾಗೂ ನನ್ನ ತಂದೆ ನನಗೆ ತೋರಿಸಿಕೊಟ್ಟ ದಾರಿಯಲ್ಲಿ ಹೋಗುತ್ತೇನೆ. ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಅಧಿವೇಶನದಲ್ಲಿ ಪಾಲ್ಗೊಂಡ ಬಳಿಕ ಅವರು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಕ್ರಮ ಎದುರಿಸಲು ಸಿದ್ಧ ಎಂದು ಅವರು ಪರೋಕ್ಷ ಸುಳಿವನ್ನು ಸಿಂಗ್ ನೀಡಿದ್ದಾರೆ.  ಪಕ್ಷಕ್ಕೆ ಸಂಬಂಧಿಸಿದ್ದು. ಕಾಂಗ್ರೆಸ್ ಯಾವುದೇ ನಿರ್ಧಾರ ಕೈಗೊಂಡರೂ ಅದನ್ನು ಎದುರಿಸಲು ಸಿದ್ಧ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನಡೆಸಿದ ಪಾದಯಾತ್ರೆಯಿಂದಲೂ ಅದಿತಿ ದೂರವೇ ಉಳಿದು ಎಲ್ಲರನ್ನು ಚಕಿತಗೊಳಿಸಿದ್ದಾರೆ.