ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಆಕ್ರೋಶ: ಬಿ. ನಾಗೇಂದ್ರ ಅವರ ವಿರುದ್ಧ ಅಪಪ್ರಚಾರ ನಿಲ್ಲಿಸಲು ಆಗ್ರಹ
Congress outraged at BJP leaders; demands an end to the smear campaign against B. Nagendra
ಲೋಕದರ್ಶನ ವರದಿ
ಬಳ್ಳಾರಿ, ಆ.13: ಮಾಜಿ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಾಯಕರು ವಿನಾಕಾರಣ ಅಪಪ್ರಚಾರ ನಡೆಸುತ್ತಿದ್ದು, ಅವರ ಗೌರವಕ್ಕೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಲಿಂಗಣ್ಣ ನಾಯಕ ಗುಡ್ಜಾಲ್ ಆರೋಪಿಸಿದ್ದಾರೆ.
ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಕೇಳಿಬಂದ ಸಂದರ್ಭದಲ್ಲಿ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿದ್ದರು. ಇದೀಗ ಎಸ್‌ಐಟಿ ತನಿಖೆಯಲ್ಲಿ ಅವರಿಗೆ ಕ್ಲೀನ್ಚಿಟ್ ದೊರೆತ ಬಳಿಕ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರೆ್ಡ ಮಾಡಲಾಗಿದೆ. ಇದನ್ನು ವಿರೋಧಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಅವರು ಹೇಳಿದ್ದಾರೆ.
ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಹಾಗೂ ಚಿತ್ರದುರ್ಗ ಭಾಗದಲ್ಲಿ ಮಾಸ್ ಲೀಡರ್ ಆಗಿ ಹೊರಹೊಮ್ಮುತ್ತಿರುವ ಬಿ. ನಾಗೇಂದ್ರ ಅವರನ್ನು ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ಬಿಜೆಪಿ ನಾಯಕರು ಸಮುದಾಯಗಳ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಲಿಂಗಣ್ಣ ನಾಯಕ ಆರೋಪಿಸಿದ್ದಾರೆ.
ಯಡಿಯೂರ್ಪ ಹಾಗೂ ಜನಾರ್ದನ ರೆಡ್ಡಿ ಅವರ ವಿಚಾರಗಳನ್ನು ಪ್ರಸ್ತಾಪಿಸಿದ ಅವರು, ಇಂತಹ ಹಿನ್ನೆಲೆ ಹೊಂದಿರುವ ನಾಯಕರನ್ನೇ ಬಿಜೆಪಿ ಮತ್ತೆ ಪಕ್ಷಕ್ಕೆ ಕರೆತಂದು ಅಧಿಕಾರ ನೀಡಿದೆ. ಹೀಗಿರುವಾಗ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿಯ ನೈತಿಕತೆ ಏನು ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಮಳೆ ಕೊರತೆ, ಬರಗಾಲ ಹಾಗೂ ರೈತರ ಸಮಸ್ಯೆಗಳಂತಹ ಗಂಭೀರ ವಿಚಾರಗಳಿದ್ದರೂ ಬಿಜೆಪಿ ನಾಯಕರು ಅವುಗಳ ಬಗ್ಗೆ ಧ್ವನಿ ಎತ್ತದೆ ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಬಿ. ಶ್ರೀರಾಮುಲು ಅವರನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ವಾಲ್ಮೀಕಿ ಸಮುದಾಯದಲ್ಲಿ ಬಿ. ನಾಗೇಂದ್ರ ಅವರ ವಿರುದ್ಧ ಭಿನ್ನಾಭಿಪ್ರಾಯ ಮೂಡಿಸುವ ಕುತಂತ್ರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಸಮುದಾಯವನ್ನು ವಿಭಜಿಸುವ ಇಂತಹ ಪ್ರಯತ್ನಗಳನ್ನು ದಲಿತ ಹಾಗೂ ಹಿಂದುಳಿದ ಸಮುದಾಯಗಳು ಸಹಿಸುವುದಿಲ್ಲ ಎಂದರು.
ಬಿಜೆಪಿಯಲ್ಲಿ ಹಲವು ಆರೋಪಗಳನ್ನು ಎದುರಿಸಿರುವ ನಾಯಕರಿಗೆ ಸಚಿವ ಹಾಗೂ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಆದರೆ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಪದೇಪದೇ ರಾಜೀನಾಮೆಗೆ ಒತ್ತಾಯಿಸುವ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಲಿಂಗಣ್ಣ ನಾಯಕ ಹೇಳಿದರು.
ಬಿಜೆಪಿ ತನ್ನ ಕುತಂತ್ರದ ರಾಜಕಾರಣವನ್ನು ನಿಲ್ಲಿಸಬೇಕು. ಇದೇ ಧೋರಣೆ ಮುಂದುವರಿದರೆ ರಾಜ್ಯಾದ್ಯಂತ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ನ ರಾಜ್ಯ ಪರಿಶಿಷ್ಟ ಪಂಗಡ ವಿಭಾಗದಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 