ಬಿಜೆಪಿಯ ನಾರಾಯಣಸ್ವಾಮಿ ಮತ್ತು ರವಿಕುಮಾರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Congress protests against BJP's Narayanaswamy and Ravikumar
ಕೊಪ್ಪಳ 2: ದಲಿತ ವಿರೋಧಿ, ಮಹಿಳಾ ವಿರೋಧಿ, ಜನಪರ ಕಾಂಗ್ರೆಸ್ ಗ್ಯಾರಂಟಿ ವಿರೋಧಿ ಬಿಜೆಪಿ ಮತ್ತು ಅದರ ಪ್ರತಿನಿಧಿಗಳಾದ ನಾರಾಯಣಸ್ವಾಮಿ ಮತ್ತು ರವಿಕುಮಾರ ವಿರುದ್ಧ ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಕೂಡಲೆ ಬಿಜೆಪಿಯ ನಾರಾಯಣಸ್ವಾಮಿ ಮತ್ತು ರವಿಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ಅವರನ್ನು ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಪಕ್ಷ ಕೊಪ್ಪಳದಲ್ಲಿ ಸೋಮವಾರದಂದು ಬೃಹತ್ ಪ್ರತಿಭಟನೆ ನಡೆಸಿ ಆಗ್ರಹಿಸಿದರು.
ಪ್ರವಾಸಿ ಮಂದಿರದಿಂದ ಅಶೋಕ ವೃತ್ತದವರೆಗೆ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಬಯ್ಯಾಪೂರ, ಸಂಸದ ಕೆ. ರಾಜಶೇಖರ ಹಿಟ್ನಾಳ, ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಮಾಜಿ ಶಾಸಕ ಕೆ. ಬಸವರಾಜ ಹಿಟ್ನಾಳ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಇಟ್ಟಂಗಿ, ಎಸ್ ಟಿ. ಸೆಲ್ ಜಿಲ್ಲಾಧ್ಯಕ್ಷ ಟಿ. ರತ್ನಾಕರ, ಮೈನಾರಿಟಿ ಜಿಲ್ಲಾಧ್ಯಕ್ಷ ಮೈನುದ್ದಿನ್ ಮುಲ್ಲಾ, ಎಸ್. ಸಿ. ಜಿಲ್ಲಾಧ್ಯಕ್ಷ ಗಾಳೆಪ್ಪ ಪೂಜಾರ, ಮುಖಂಡರಾದ ಕೆ. ಎಂ. ಸೈಯ್ಯದ್, ಜ್ಯೋತಿ ಎಂ. ಗೊಂಡಬಾಳ, ಸಲೀಂ ಅಳವಂಡಿ, ಬಾಲಚಂದ್ರ, ಮುತ್ತುರಾಜ ಕುಷ್ಟಗಿ, ಕಾಟನ್ ಪಾಶಾ, ಅಜಿಮ್ ಅತ್ತಾರ್, ಲಿಂಗೇಶ ಕಲ್ಗುಡಿ, ಹನುಮಂತಪ್ಪ ಗಂಗಾವತಿ, ಅಕ್ಬರ್ ಪಾಶಾ ಪಲ್ಟನ್, ಮಲ್ಲಿಕಾರ್ಜುನ ಪೂಜಾರ, ಸಿದ್ದು ಮ್ಯಾಗೇರಿ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅಲ್ಲದೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 