ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ  Congress protests against the Central Government.

ಲೋಕದರ್ಶನ ವರದಿ 

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ  

ಹಾರೂಗೇರಿ ಸೆ.11: ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ, ಕಚೇರಿ ಮೇಲೆ ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗದವರು ಶುಕ್ರವಾರ ಪಟ್ಟಣದಲ್ಲಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.  

ಡಾ. ಬಿ.ಆರ್‌. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಫಲಕ ಹಿಡಿದು ಮೆರವಣಿಗೆ ನಡೆಸಿ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ರಾಜ್ಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ಸಂಚಾರ ಬಂದ್ ಮಾಡಿದರು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  

ಕುಡಚಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ರೇವಣಸಿದ್ದಪ್ಪ ಸರವ್ ಮಾತನಾಡಿ, ಸತೀಶ್ ಜಾರಕಿಹೊಳಿ ಅವರು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಭೀತಿಯಿಂದ ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂದ ಇಡಿ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದರು.  

ಯುವ ಮುಖಂಡ ಯಲ್ಲಪ್ಪ ಶಿಂಗಿ, ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲಿನ ಇಡಿ ದಾಳಿ ಷಡ್ಯಂತ್ರವಾಗಿದ್ದು, ಕಾಂಗ್ರೆಸ್ ಸಚಿವರನ್ನು ಗುರಿಯಾಗಿಸಲಾಗುತ್ತಿದೆ ಎಂದು ದೂರಿದರು. ಪ್ರತಿಭಟನಾಕಾರರು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.  

ಸಿಪಿಐ ರತ್ನಕುಮಾರ ಜೀರಗ್ಯಾಳೆ, ಗ್ರಾಮ ಲೆಕ್ಕಾಧಿಕಾರಿ ಎನ್‌.ಪಿ.ನಕ್ಕರಗುಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.