ಉಪಚುನಾವಣೆ ಕಾಂಗ್ರೆಸ್ ಗೆಲ್ಲಲಿದೆ: ಸಚಿವ ತಂಗಡಗಿ

ಕೊಪ್ಪಳ 17: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದ್ದು ಈ ಮೂರು ಕ್ಷೇತ್ರದಲ್ಲಿ ಈ ಬಾರಿ ನಮ್ಮ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂದು ಹಿಂದುಳಿದ ವರ್ಗ ಗಳ ಕಲ್ಯಾಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ದೃಢ ವಿಶ್ವಾಸ ವ್ಯಕ್ತಪಡಿಸಿ ಹೇಳಿಕೆ ನೀಡಿದರು.

ಅವರು ಗುರುವಾರ ಕೊಪ್ಪಳದಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಆವರು ಸಂಡೂರು ಚನ್ನಪಟ್ಟಣ ಮತ್ತು ಶಿಗ್ಗಾವಿ ಈ ಮೂರು ಕ್ಷೇತ್ರಗಳ ವಿಧಾನಸಭೆಯ  ಉಪಚುನಾವಣೆ ಯಲ್ಲಿ ಈ ಬಾರಿ ಕ್ಷೇತ್ರದ ಮತದಾರರು ಬಿಜೆಪಿ ಮತ್ತು ಜೆಡಿಎಸ್ ಗೆ ತಕ್ಕ ಪಾಠ ಕಲಿಸಲಿದ್ದಾರೆ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಕಾಂಗ್ರೆಸ್ ಗೆಲ್ಲಲು ಶ್ರೀರಕ್ಷೆಯಾಗಲಿದೆ ಎಂದರು,ಮುಂದುವರೆದು ಮಾತನಾಡಿ ಅವರು ಬಿಜೆಪಿ ಅನಾವಶ್ಯಕವಾಗಿ ಮೂಡ ವಿಷಯದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ ಅದು ಒಂದು ಹಗರಣವೇ ಅಲ್ಲ, ಜನರ ಹಿತ ದೃಷ್ಟಿಯಿಂದ ಪಡೆದ ನಿವೇಶನಗಳು ವಾಪಸ್ ನೀಡಿದ್ದಾರೆ ಅದರಂತೆ ರಾಹುಲ್ ಖರ್ಗೆ ಅವರು ಕೂಡ ವಾಪಸ್ ಕೊಡಲು ಮುಂದಾಗಿದ್ದಾರೆ ಒಂದು ವೇಳೆ ಬಿಜೆಪಿ ಜೆಡಿಎಸ್ ನವರಿಗೆ ಧೈರ್ಯ ಇದ್ದರೆ ಅವರು ಪಡೆದುಕೊಂಡಿರುವ ಕೋಟ್ಯಾನು ಗಟ್ಟಲೆ ಬೆಲೆ ಬಾಳುವ ನಿವೇಶನಗಳು ವಾಪಸ್ ನೀಡಲಿ ನೋಡೋಣ ಎಂದರು, ಸರಕಾರ ಪ್ರಕಟಗೊಳಿಸಲಿರುವ ಗಣತಿ ವರದಿಯನ್ನು ಸಾಮಾಜಿಕ ಶೈಕ್ಷಣಿಕ ಆರ್ಥಿಕ ವಾಗಿ ಹಿಂದುಳಿದವರನ್ನು ಮುಖ್ಯ ವಾಹಿನಿಗೆ ತರಲು ಅನುಕೂಲ ವಾಗುತ್ತದೆ ಇದು ಜಾತಿಗಣತಿ ಅಲ್ಲ ಜಾತಿಗಣತಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ, ನಾವು ಮಾಡುತ್ತಿರುವುದು ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಏಳಿಗೆ ಮತ್ತು ಅಭಿವೃದ್ಧಿಗಾಗಿ ಗಣತಿ ಕಾರ್ಯ ಮಾಡುತ್ತಿದ್ದೇವೆ ಇದಕ್ಕೆ ಜಾತಿ ಜನಗಣತಿ ಎಂದು ಹೇಳುವುದು ತಪ್ಪು ಎಂದರು, ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಇಂದಿರಾ ಕ್ಯಾಂಟೀನ್ ಬಗ್ಗೆ ಕೊಪ್ಪಳ ಜಿಲ್ಲಾ ಬಿಜೆಪಿ ಅವರು ವಿರೋಧಿಸುತ್ತಿರುವುದು ಸಮಂಜಸ ಅಲ್ಲ ಆ ಜಾಗದ ಹತ್ತಿರ ಬಿಜೆಪಿಯವರ ಜಾಗ ಇರಬಹುದು ಅದಕ್ಕೆ ಅವರು ವಿರೋಧ ಮಾಡುತ್ತಿದ್ದಾರೆ ಎಂದು ಟೀಕಿಸಿದ ಅವರು ಕಾನೂನು ಬದ್ಧವಾಗಿ ಇಂದಿರಾ ಕ್ಯಾಂಟೀನ್ ಕಟ್ಟಡ ನಿರ್ಮಾಣ ಕಾರಟಗಿ ಪಟ್ಟಣದಲ್ಲಿ ನಡೆಯುತ್ತಿದೆ ಎಂದ ಆವರು ಈಗ ತಾನೆ ನಮ್ಮ ರಾಜ್ಯ ಸರ್ಕಾರದ ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ವತಿಯಿಂದ ದಸರಾ ಹಬ್ಬ ಅಚ್ಚುಕಟ್ಟಾಗಿ ಯಶಸ್ವಿಯಾಗಿ ಆಚರಣೆ ಮಾಡಲಾಗಿ ಈಗ ಕನ್ನಡ ರಾಜ್ಯೋತ್ಸವದ ಸಂಭ್ರಮ ದಲ್ಲಿ ತೊಡಗಿಸಿಕೊಂಡಿದ್ದೇವೆ ಅದು ಕೂಡ ಈ ಬಾರಿ ಅದ್ದೂರಿ ಮತ್ತು ಅರ್ಥಪೂರ್ಣವಾಗಿ ನಡೆಯಲಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು, ಈ ಸಂದರ್ಭದಲ್ಲಿ ಅವರೊಂದಿಗೆ ಶಾಸಕ ,ಕೆ. ರಾಘವೇಂದ್ರ ಹಿಟ್ನಾಳ, ಕಾಂಗ್ರೆಸ್  ವಕ್ತಾರ ಕೃಷ್ಣ ಇಟ್ಟಂಗಿ ಸೇರಿದಂತೆ ಅನೇಕರು  ಪಾಲ್ಗೊಂಡಿದ್ದರು,