ಅಮ್ಜದ್ ಪಟೇಲ್ಗೆ ವಿಧಾನ ಪರಿಷತ್ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ
Congress workers urge for Legislative Council seat for Amjad Patel.
ಅಮ್ಜದ್ ಪಟೇಲ್ಗೆ ವಿಧಾನ ಪರಿಷತ್ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ
ಕೊಪ್ಪಳ ಸೆ.13: ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷದ ಏಳು-ಬೀಳುಗಳ ನಡುವೆಯೂ ಪಕ್ಷದ ತತ್ವ-ಸಿದ್ಧಾಂತಗಳಿಗೆ ನಿಷ್ಠರಾಗಿ ಸತತ 38 ವರ್ಷಗಳಿಂದ ದುಡಿಯುತ್ತಿರುವ ಹಿರಿಯ ನಾಯಕ ಅಮ್ಜದ್ ಪಟೇಲ್ ಅವರಿಗೆ ವಿಧಾನ ಪರಿಷತ್ ಸದಸ್ಯ ಸ್ಥಾನ ಅಥವಾ ರಾಜ್ಯಮಟ್ಟದ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂಬ ಒತ್ತಾಯ ಕಾಂಗ್ರೆಸ್ ಕಾರ್ಯಕರ್ತರಿಂದ ಕೇಳಿಬರುತ್ತಿದೆ. ವಿದ್ಯಾರ್ಥಿ ದೆಸೆಯಿಂದಲೇ ರಾಜಕೀಯ ಪ್ರವೇಶಿಸಿದ ಅಮ್ಜದ್ ಪಟೇಲ್ ಅವರು ಹಿರಿಯ ರಾಜಕಾರಣಿ, ಮಾಜಿ ಲೋಕಸಭಾ ಸದಸ್ಯ ಎಚ್.ಜಿ. ರಾಮುಲು ಹಾಗೂ ಮಾಜಿ ಶಾಸಕ ದಿವಂಗತ ಎಂ.ಬಿ. ದಿವಟರ್ ಅವರ ಮಾರ್ಗದರ್ಶನದಲ್ಲಿ ಎನ್ಎಸ್ಯುಐ ಮೂಲಕ ರಾಜಕೀಯ ಜೀವನ ಆರಂಭಿಸಿದರು. ಬಳಿಕ ಪಕ್ಷದ ವಿವಿಧ ಹಂತಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ್ದಾರೆ. ಎನ್ಎಸ್ಯುಐ ರಾಜ್ಯಾಧ್ಯಕ್ಷರಾಗಿದ್ದ ಸಲೀಂ ಅಹ್ಮದ್ ಅವರ ಅವಧಿಯಲ್ಲಿ ಅಮ್ಜದ್ ಪಟೇಲ್ ಅವರು ಮೊದಲು ತಾಲೂಕು ಕಾರ್ಯದರ್ಶಿಯಾಗಿ, ನಂತರ ತಾಲೂಕು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. ನೂತನ ಕೊಪ್ಪಳ ಜಿಲ್ಲೆ ರಚನೆಯಾದ ಬಳಿಕ ಸ್ಟಾಲಿನ್ ಅವರ ನೇತೃತ್ವದಲ್ಲಿ ಜಿಲ್ಲೆಯ ಮೊದಲ ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡು, ಮೂರು ವರ್ಷಗಳ ಕಾಲ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳು ಹಾಗೂ ಸರ್ಕಾರದ ನೀತಿಗಳ ವಿರುದ್ಧ ಹೋರಾಟಗಳನ್ನು ಸಂಘಟಿಸಿದರು. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿದ್ದ ದಿನೇಶ್ ಗುಂಡೂರಾವ್ ಅವರ ಅವಧಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಎರಡು ವರ್ಷ ಸೇವೆ ಸಲ್ಲಿಸಿದ ಅವರು, ಭಾರತ್ ಸೇವಾದಳದ ಕಾರ್ಯದರ್ಶಿಯಾಗಿ ನಾಲ್ಕು ವರ್ಷಗಳ ಕಾಲ ಯುವಜನರಲ್ಲಿ ದೇಶಭಕ್ತಿ ಮತ್ತು ಸೇವಾ ಮನೋಭಾವ ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇದು ಕೇವಲ ಒಬ್ಬ ವ್ಯಕ್ತಿಗೆ ನೀಡುವ ಸ್ಥಾನಮಾನವಲ್ಲ; ತಳಮಟ್ಟದಲ್ಲಿ ಪಕ್ಷಕ್ಕಾಗಿ ನಿರಂತರವಾಗಿ ದುಡಿಯುತ್ತಿರುವ ಅಸಂಖ್ಯಾತ ಕಾರ್ಯಕರ್ತರಿಗೆ ನೀಡುವ ಗೌರವ, ಶಕ್ತಿ ಮತ್ತು ಭರವಸೆಯ ಸಂಕೇತವಾಗಲಿದೆ ಎಂದು ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 