ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಅತ್ಯವಶ್ಯಕ: ಮಹಾವೀರ ಉಪಾದ್ಯ
Conservation and development of lakes is essential: Mahavir Upadhyaya
ಧಾರವಾಡ 03: ಎಸ್.ಡಿ.ಎಂ. ಸಂಸ್ಥೆಯ ವತಿಯಿಂದ ಗ್ರಾಮೀಣ ಭಾಗದಲ್ಲಿನ 3000ಕ್ಕೂ ಹೆಚ್ಚು ಕೆರೆಗಳನ್ನು ಹೂಳೆತ್ತುವುದರ ಮೂಲಕ ನೀರಿನ ಸಂಗ್ರಹಣೆ ಮತ್ತು ಸಂರಕ್ಷಣೆ ಕಾರ್ಯವನ್ನು ಈಗಾಗಲೇ ಕೈಗೊಂಡಿರುವುದು ಶ್ಲಾಘನೀಯ ಎಂದು ಧಾರವಾಡ ಜೆ.ಎಸ್.ಎಸ್. ಐ.ಟಿ.ಐ. ಕಾಲೇಜ್ ಪ್ರಾಚಾರ್ಯ ಮಹಾವೀರ ಉಪಾದ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ), ಧಾರವಾಡ ವತಿಯಿಂದ ದಿ. 3ರಂದು ಜೆ.ಎಸ್.ಎಸ್. ಮಂಜುನಾಥೇಶ್ವರ ಸೆಂಟ್ರಲ್ ವಿದ್ಯಾಲಯ, ಧಾರವಾಡ ಶಾಲಾ ಮಕ್ಕಳಿಗೆ ಸನ್ನಿಧಿ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ಸಮಗ್ರ ಜಲ ಮತ್ತು ನೆಲ ನಿರ್ವಹಣೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಹೆಚ್ಚುತ್ತಿರುವ ಜನಸಂಖ್ಯೆ, ಅಧುನಿಕರಣದ ಹೆಸರಿನಲ್ಲಿ ಕೆರೆಗಳ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಮಳೆ ನೀರು ಸಂಗ್ರಹಣೆಯಾಗದ ಪ್ರಯುಕ್ತ, ಮಳೆಗಾಲದಲ್ಲಿ ಪ್ರವಾಹದಿಂದ ಮನೆಗಳಿಗೆ ನೀರು ನುಗ್ಗುತ್ತಿದೆ. ಕಾರಣ ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಅತ್ಯವಶ್ಯಕವಾಗಿದೆ ಎಂದು ಅವರು ತಿಳಿಸಿದರು.
ಡಾ. ಗೀರೀಶ್ ಎನ್. ಮರಡ್ಡಿ, ನಿರ್ದೇಶಕರು, ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ), ಧಾರವಾಡ ರವರು ಅಧ್ಯಕ್ಷೀಯ ನುಡಿಗಳನ್ನು ಹೇಳುತ್ತಾ, ಕೆರೆಗಳ ಹೂಳು ಎತ್ತುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಸಿ, ವಾಲ್ಮಿ ಸಂಸ್ಥೆಯ ಉದ್ದೇಶ, ಮಣ್ಣು ಮತ್ತು ನೀರಿನ ಸಂರಕ್ಷಣೆ ಕುರಿತು ಕೈಗೊಳ್ಳುತ್ತಿರುವ ಕಾರ್ಯಚಟುವಟಿಕೆಗಳು, ಕಡಿಮೆ ನೀರು ಬಳಕೆ ಮಾಡಿ ಅಧಿಕ ಇಳುವರಿ ಕೊಡುವ ಬೆಳೆಗಳು, ತಾಂತ್ರಿಕತೆಗಳ ಬಗ್ಗೆ ತಿಳುವಳಿಕೆ ನೀಡಿದರು. ಹೆಚ್ಚುತ್ತಿರುವ ಜನಸಂಖ್ಯೆ, ಕಡಿಮೆಯಾಗುತ್ತಿರುವ ಕೃಷಿ ಭೂಮಿಯಲ್ಲಿ ಅಧಿಕ ಕೃಷಿ ಉತ್ಪಾದಕತೆಯ ಜೊತೆಗೆ ಮಣ್ಣು ಮತ್ತು ನೀರಿನ ಸಂರಕ್ಷಣೆ ತಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ. ಹೆಚ್ಚುತ್ತಿರುವ ನೀರಿನ ಸಮಸ್ಯೆ, ಅಭಾವ ನೀಗಿಸಲು ಇಂದಿನ ವಿದ್ಯಾರ್ಥಿಗಳು ಎಚ್ಚೆತ್ತುಕೊಂಡು ಮುಂದಿನ ಪೀಳಿಗೆಗಾಗಿ ಜಲಯೋಧರಾಗಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮಾಡಲು ಕರೆ ನೀಡುತ್ತಾ, ನೀರಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಅರಿವು ಮೂಡಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾಧನಾ ಎಸ್. ಪ್ರಾಚಾರ್ಯರು, ಜೆ.ಎಸ್.ಎಸ್.ಮಂಜುನಾಥೇಶ್ವರ ಸೆಂಟ್ರಲ್ ವಿದ್ಯಾಲಯ, ಧಾರವಾಡ ಇವರು ವಿದ್ಯಾರ್ಥಿಗಳಿಗೆ ಸಸಿಗಳನ್ನು ನೀಡುವುದರ ಜೊತೆಗೆ ನೀರು ಮತ್ತು ಮಣ್ಣು ಸಂರಕ್ಷಣೆಯೊಂದಿಗೆ ದೇಶಕ್ಕೆ ಕೃಷಿ ಮತ್ತು ರೈತರ ಅಗತ್ಯತೆ ಬಗ್ಗೆ ತಿಳುವಳಿಕೆ ನೀಡಿದರು.
ಹವಾಮಾನ ಬದಲಾವಣೆಯ ಸನ್ನಿವೇಶದಲ್ಲಿ ಜಲ ಸಂಪನ್ಮೂಲಗಳ ಸಂರಕ್ಷಣೆ ಮತ್ತು ನಿರ್ವಹಣೆ ವಿಷಯ ಕುರಿತು ಇಂ. ಪ್ರದೀಪ ದೇವರಮನಿ, ಸಹಾಯಕ ಪ್ರಾಧ್ಯಾಪಕರು, ಮಣ್ಣಿನ ಆರೋಗ್ಯ ಮತ್ತು ಅದರ ಸಂರಕ್ಷಣೆಯ ಮಹತ್ವ ವಿಷಯ ಕುರಿತು ಡಾ. ಗೀರೀಶ್ ಎನ್. ಮರಡ್ಡಿ, ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯದ ನೀರಾವರಿ ಸನ್ನಿವೇಶ ್ಘ ನೀರಾವರಿ ವ್ಯವಸ್ಥೆಯಲ್ಲಿ ನೀರಿನ ಮಹತ್ವ ವಿಷಯ ಕುರಿತು ಇಂ. ಬಿ. ವೈ. ಬಂಡಿವಡ್ಡರ, ಪ್ರಾಧ್ಯಾಪಕರು ಉಪನ್ಯಾಸ ನೀಡಿದರು.
ಕಾರ್ಯಾಗಾರದಲ್ಲಿ 980 ವಿದ್ಯಾರ್ಥಿಗಳು, 50 ಜನ ಶಿಕ್ಷಕ, ಶಿಕ್ಷಕಿಯರು, ವಾಲ್ಮಿ ಸಂಸ್ಥೆ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಧಾರವಾಡ ವಾಲ್ಮಿ ಸಹಾಯಕ ಪ್ರಾಧ್ಯಾಪಕರು ಸುನಂದಾ ಸಿತೋಳೆ ಅವರು ಸ್ವಾಗತಿಸಿದರು. ಧಾರವಾಡ ವಾಲ್ಮಿ ಪ್ರಾಧ್ಯಾಪಕ ಇಂ. ಬಿ. ವೈ. ಬಂಡಿವಡ್ಡರ, ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ನೀರಿನ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಸಹ ಪ್ರಾಧ್ಯಾಪಕ ಇಂ. ಪ್ರದೀಪ ದೇವರಮನಿ ವಂದಿಸಿದರು. ವಾಣಿಶ್ರೀ ಎ. ಕೋಳಿವಾಡ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 