ಜ್ಞಾನ ಭಾರತಂ ಮಿಷನ್ ಅಡಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ: ಸಾರ್ವಜನಿಕರ ಸಹಕಾರಕ್ಕೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಮನವಿ

ಜ್ಞಾನ ಭಾರತಂ ಮಿಷನ್ ಅಡಿ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ: ಸಾರ್ವಜನಿಕರ ಸಹಕಾರಕ್ಕೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಮನವಿ Conservation and digitization of manuscripts under the Gyan Bharatam Mission: District Collector Dr.

ಲೋಕದರ್ಶನ ವರದಿ 

ವಿಜಯಪುರ  21: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜ್ಞಾನ ಭಾರತಂ ಮಿಷನ್ ಯೋಜನೆಯಡಿ ದೇಶಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪ್ರತಿಗಳು, ಹಸ್ತಪ್ರತಿಗಳು ಹಾಗೂ ಐತಿಹಾಸಿಕ ದಾಖಲೆಗಳನ್ನು ಸಂರಕ್ಷಿಸಿ, ಡಿಜಿಟಲೀಕರಣ ಮಾಡುವ ಮಹತ್ತರ ಕಾರ್ಯ ಆರಂಭವಾಗಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಶಾಶ್ವತವಾಗಿ ಉಳಿಸುವ ಜೊತೆಗೆ, ಸಾರ್ವಜನಿಕರಿಗೆ ಒಂದೇ ರಾಷ್ಟ್ರೀಯ ವೇದಿಕೆಯ ಮೂಲಕ ಡಿಜಿಟಲ್ ರೂಪದಲ್ಲಿ ಇವುಗಳನ್ನು ಲಭ್ಯವಾಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. 

ಯೋಜನೆಯ ಭಾಗವಾಗಿ ಹಸ್ತಪ್ರತಿಗಳ ಸಮೀಕ್ಷೆ, ಸಂರಕ್ಷಣೆ, ರಕ್ಷಣೆ, ನೋಂದಣಿ, ವಿಮರ್ಶಾತ್ಮಕ ಸಂಪಾದನೆ ಮತ್ತು ಮೊಬೈಲ್ ಪ್ರಕಟಣೆ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಮಾಹಿತಿ ಹಂಚಿಕೆ: ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ವಿಶೇಷ ಆಪ್ಲಿಕೇಷನ್  ಮೂಲಕ ದೇಶಾದ್ಯಂತ ಇರುವ ಹಸ್ತಪ್ರತಿಗಳ ಮಾಹಿತಿಯನ್ನು ಅಪ್‌ಲೋಡ್ ಮಾಡಿ, ರಾಷ್ಟ್ರೀಯ ಹಸ್ತಪ್ರತಿ ಭಂಡಾರದಲ್ಲಿ ಸಂಗ್ರಹಿಸಲಾಗುತ್ತದೆ.

ಇದರಿಂದಾಗಿ ಈ ಅಮೂಲ್ಯ ಜ್ಞಾನವನ್ನು ಜಾಗತಿಕ ಮಟ್ಟದಲ್ಲಿ ಹಂಚಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಸಾರ್ವಜನಿಕರು ಹಾಗೂ ಸಂಸ್ಥೆಗಳಿಗೆ ಮನವಿ: ಸಾರ್ವಜನಿಕರು, ಗ್ರಂಥಾಲಯಗಳು, ದೇವಾಲಯಗಳು, ಮಠಗಳು, ಸೂಫಿ ಸಂತರ ಮಸೀದಿಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಖಾಸಗಿ ಸಂಗ್ರಹಕಾರರು ತಮ್ಮಲ್ಲಿರುವ ಪ್ರಾಚೀನ ಹಸ್ತಪ್ರತಿಗಳು ಮತ್ತು ದಾಖಲೆಗಳನ್ನು ಗುರುತಿಸಲು, ಸಮೀಕ್ಷೆ ನಡೆಸಲು ಹಾಗೂ ಡಿಜಿಟಲೀಕರಣ ಕಾರ್ಯಕ್ಕೆ ಸಹಕರಿಸಬೇಕು ಎಂದು ಕೋರಲಾಗಿದೆ.