ಕನ್ನಡ ನೆಲ ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ:: ಖಾಜಿ
Conservation of Kannada ground water is our responsibility:: Qazi
ಕನ್ನಡ ನೆಲ ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ:: ಖಾಜಿ
ಕೊಪ್ಪಳ 02: ಕನ್ನಡ ನಾಡಿನ ನೆಲ ಜಲ ಇಲ್ಲಿಯ ಸಂಸ್ಕೃತಿ ಪರಂಪರೆ ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಪರಿಚಯಿಸುವಂಥ ಜವಾಬ್ದಾರಿ ನಮ್ಮ ಮೇಲೆ ಇದೆ, ಕನ್ನಡ ನೆಲ ಜಲ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಧ್ಯಕ್ಷ ಸಯ್ಯದ್ ಗೌಸ್ ಪಾಷಾ ಖಾಜಿ ಹೇಳಿದರು, ಅವರು ಶನಿವಾರ ನಗರದ ನಿರ್ಮಿತಿ ಕೇಂದ್ರದ ಬಡಾವಣೆಯಲ್ಲಿರುವ ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಮಿಲ್ಲತ್ ಪಬ್ಲಿಕ್ ಶಾಲೆಯಲ್ಲಿ ಶನಿವಾರದಂದು ಏರಿ್ಡಸಿದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಭುವನೇಶ್ವರಿ ತಾಯಿಯ ಭಾವಚಿತ್ರಕ್ಕೆ ಮಾಲಾರೆ್ಣ ಮಾಡಿ ಗೌರವ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು, ನಾವೆಲ್ಲರೂ ಕನ್ನಡಿಗರು ಕನ್ನಡ ಭಾಷೆ ನಮ್ಮ ನಾಡಿನ ಅತ್ಯಂತ ಶ್ರೀಮಂತ ಭಾಷೆಯಾಗಿದೆ ಪ್ರತಿಯೊಬ್ಬರು ಕಡ್ಡಾಯವಾಗಿ ಕನ್ನಡ ಕಲಿಯಬೇಕು ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಕನ್ನಡ ಉಳಿಸಿ ಬೆಳೆಸುವಂತಹ ಕೆಲಸ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಈ ದಿಶೆಯಲ್ಲಿ ನಾವೆಲ್ಲರೂ ಸೇರಿ ಶ್ರಮಿಸೋಣ ಎಂದು ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಅಧ್ಯಕ್ಷ ಸಯ್ಯದ್ ಗೌಸ್ ಪಾಷಾ ಖಾ ಜಿ ಹೇಳಿದರು,ಸಮಾರಂಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಕಾರ್ಯ ನಿರ್ವಾಹಕ ಸಂಚಾಲಕ ಅಬ್ದುಲ್ ಅಜೀಜ್ ಮಾನ್ವಿ ಕರ್, ಶಾಲೆಯ ಮುಖ್ಯ ಶಿಕ್ಷಕ ಮಹಮ್ಮದ್ ಅಜೀಜ್ ರೇವಡಿ, ಸೇರಿದಂತೆ ಸಹಶಿಕ್ಷಕರು ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪಾಲಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ನಂತರ ಎಲ್ಲರನ್ನು ಸಿಹಿ ಹಂಚಿಸಿ ಶುಭ ಕೋರಲಾಯಿತು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 