ವಿಜೃಂಭಣೆಯ ಆಚರಣೆಗೆ ಕ್ಷೇತ್ರಾಧ್ಯಕ್ಷ ಬಳೆ ಮಲ್ಲಿಕಾರ್ಜುನ ಕರೆ
Constituency President Bale Mallikarjuna calls for celebration of grandeur
ಕಂಪ್ಲಿ 28 : ಪ್ರತಿವರ್ಷದಂತೆ ಈ ಬಾರಿಯೂ ನ.1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕರವೇ(ನಾರಾಯಣಗೌಡ ಬಣ)ಕಂಪ್ಲಿ ಕ್ಷೇತ್ರ ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ತಿಳಿಸಿದರು.
ಪಟ್ಟಣದ ಅತಿಥಿ ಗೃಹದಲ್ಲಿ ಕನ್ನಡ ರಾಜ್ಯೋತ್ಸವ ಹಿನ್ನಲೆ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಪ್ರತಿ ವರ್ಷ ನವೆಂಬರ್ 1 ರಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಕಂಪ್ಲಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುವುದು ಎಂದರು. ನಂತರ ಕಂಪ್ಲಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ನಿರ್ದೇಶಕ(ಕರವೇ ತಾಲೂಕು ಉಪಾಧ್ಯಕ್ಷ) ವಿ.ಬಿ.ನಾಗರಾಜ ಇವರಿಗೆ ಹಸಿರು ಶ್ಯಾಲು ಹಾಕಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ರಾಜಶೇಖರ, ನಗರ ಘಟಕ ಅಧ್ಯಕ್ಷ ಜಂಗಲಿ ನಾಗರಾಜ, ಸಾಮಾಜಿಕ ಜಾಲತಾಣ ಅಧ್ಯಕ್ಷ ಕಂಬಳಿ ರಾಮಕೃಷ್ಣ, ಪದಾಧಿಕಾರಿಗಳಾದ ಜೀರ್ ಗಣೇಶ, ದೊಡ್ಮನೆ ಗಣೇಶ, ಜೆ.ಉಮೇಶ, ಬಳ್ಳಾಪುರ ಮೌನೇಶ, ಹರ್ಷಾ, ಶಂಭುಲಿಂಗ, ಎಚ್.ಪಿ.ಗಣೇಶ, ಯಲ್ಲಪ್ಪ, ಮಂಜುನಾಥ, ಮುನ್ನಾ, ರಾಘು, ಶೇಕ್ಷಾವಲಿ, ರಂಜಿತ್, ಹರೀಷ್, ವಾಸುಕುಮಾರ, ಶ್ರೀಕಾಂತ್, ಸುನೀಲ್ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 