ಸಂವಿಧಾನ ದಿನ: ಪ್ರತಿಜ್ಞಾ ವಿಧಿ ಸ್ವೀಕಾರ

ಗದಗ 26: ಸಂವಿಧಾನ ದಿನದ ಅಂಗವಾಗಿ ಗದಗ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲನಲ್ಲಿಂದು ಭಾರತ ದೇಶವನ್ನು ಒಂದು ಸಾರ್ವಭೌಮ ಸಮಾಜವಾದಿ, ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು.  ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಖಾಜಾ ಹುಸೇನ ಮುಧೋಳ  ಅವರು ಸಾಮಾಜಿಕ, ಆಥರ್ಿಕ, ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ, ಉಪಾಸನಾ ಸ್ವಾತಂತ್ರ್ಯ, ಸ್ಥಾನಮಾನ ಹಾಗೂ ಅವಕಾಶ ಸಮಾನತೆಯ ಪ್ರಮಾಣ ವಚನವನ್ನು ಬೋಧಿಸಿದರು.

      ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ. ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಶಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.