ನವದೆಹಲಿ, 26 ದೇಶದಲ್ಲಿ ಸಂವಿಧಾನ ಜಾರಿಗೆ ಬಂದು 70 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಸಂಸತ್ತಿನ ಜಂಟಿ ವಿಶೇಷ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ನಡೆಯಲಿರುವ ಅಧಿವೇಶನವನ್ನು ಅವರು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಕಲಾಪದಿಂದ ದೂರ ಉಳಿಯಲು ನಿಧಾರ್ ಮಾಡಿವೆ. ಸೋಮವಾರ ಇದೇ ವಿಚಾರ ಸಂಸತ್ತಿನ ಎರಡೂ ಸದನಗಳಲ್ಲಿ ಪ್ರಸ್ತಾಪವಾಗಿ ಕಲಾಪವನ್ನು ನುಂಗಿ ಹಾಕಿತ್ತು. ಪದೇ ಪದೇ ಗದ್ದಲ, ಕೋಲಾಹಲದ ಕಾರಣ ಉಭಯ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿತ್ತು. ಇಂದಿನ ವಿಶೇಷ ಅಧಿವೇಶನದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಲೋಕಸಭೆಯ ಸ್ಪೀಕರ್ ಓಂ ಬಿಲರ್ಾ ಸಹ ಭಾಗಿಯಾಗಲಿದ್ದಾರೆ. ಸಂವಿಧಾನ ದಿನದ ಅಂಗವಾಗಿ ವರ್ಷವಿಡೀ ಹಲವಾರು ಕಾರ್ಯಕ್ರಮಗಳನ್ನು ದೇಶದ ಉದ್ದಗಲಕ್ಕೂ ಹಮ್ಮಿಕೊಳ್ಳಲಾಗಿದೆ.