ಸಂವಿಧಾನ ದಿನಾಚರಣೆ
Constitution Day Celebration
ಧಾರವಾಡ 26: ಧಾರವಾಡ ಗ್ರಾಮೀಣ ಕ್ಷೇತ ಶಿಕ್ಷಣಾಧಿಕಾರಿ ಕಾರ್ಯಾಲಯದಲ್ಲಿ "ಸಂವಿಧಾನ ದಿನಾಚರಣೆ " ಅಂಗವಾಗಿ ಭಾರತ ಸಂವಿಧಾನ ಪೀಠಿಕೆಯನ್ನು ಓದುವುದರ ಮೂಲಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ (ಪ್ರಮಾಣ ವಚನ) ಸ್ವೀಕರಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಮಾತನಾಡುತ್ತಾ ನವೆಂಬರ್ 26 ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ದಿನ. ಪ್ರತಿ ಭಾರತೀಯನಿಗೂ ಸಮಾನತೆಯ ಹಕ್ಕು, ಮುಕ್ತವಾಗಿ ಬದುಕುವ ಹಕ್ಕು ಮತ್ತು ಸ್ವಂತ ನಿರ್ಧಾರ ತೆಗೆದುಕೊಳ್ಳುವ ಹಕ್ಕನ್ನು ನೀಡುವ ದಾಖಲೆಯನ್ನು ರಚಿಸಿದ ದಿನ ಇದಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನು ರೂಪಿಸುವ ಕರ್ತವ್ಯಗಳೊಂದಿಗೆ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿ ಹಿಡಿಯುವಂತೆಯೂ ಕರೆ ನೀಡಿದರು.
ಕೇತ್ರ ಸಮನ್ವಯಾಧಿಕಾರಿ ಕುಮಾರ ಕೆ.ಎಫ್, ಮಾತನಾಡಿ ನಮ್ಮ ಸಂವಿಧಾನದ ರಚನೆಕಾರರ ದೃಷ್ಟಿಕೋನ, ಸುಧಾರಣೆಗಳನ್ನು ಪ್ರತಿಬಿಂಬಿಸುತ್ತವೆ ಮತ್ತು ವಿಕಸಿತ ಭಾರತದ ಪ್ರಗತಿಗೆ ಮಾರ್ಗದರ್ಶನ ನೀಡುತ್ತವೆ ಎಂದು ಹೇಳಿದರು. ನಾಗರಿಕರ ಹಕ್ಕುಗಳನ್ನು ಸುರಕ್ಷಿತಗೊಳಿಸಲು ಸಂವಿಧಾನ ನಿರ್ಮಾತೃಗಳು ಸಂವಿಧಾನವನ್ನು ರೂಪಿಸಿದರು ಎಂದು ಅವರು ಹೇಳಿದರು.
ಇ.ಸಿ.ಓ, ಬಿ.ಆರ್.ಪಿ, ಸಿ.ಆರ್.ಪಿ, ಬಿ.ಐ.ಇ.ಆರ್.ಟಿ, ಬಿಇಓ ಹಾಗೂ ಬಿಆರಸಿ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಭಾರತ ಸಂವಿಧಾನ ಪೀಠಿಕೆಯನ್ನು ಓದುವುದರ ಮೂಲಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ (ಪ್ರಮಾಣ ವಚನ) ಸ್ವೀಕರಿಸಲಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 