ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ
Constitution architect Dr. B.R. Ambedkar's 135th birth anniversary
ಲೋಕದರ್ಶನ ವರದಿ
ಕೊಪ್ಪಳ 15: ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ಬರೆದ ನೊಂದವರ, ನೋವುಂಡವರ ಪಾಲಿನ ಭಾರತದ ಭಾಗ್ಯವಿಧಾತ, ಮಹಾಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ರವರ 135 ನೇ ಜನ್ಮದಿನವನ್ನು ಇಲ್ಲಿನ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ ಕೊಪ್ಪಳದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸ್ಮರಿಸಲಾಯಿತು.
ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ ಕೊಪ್ಪಳದ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಉಷಾದೇವಿ ಹಿರೇಮಠ ಅವರು ಮಾತನಾಡಿ, ಅಂಬೇಡ್ಕರ್ ಅವರು ಸಮಾನತೆ, ನ್ಯಾಯ ಮತ್ತು ಶಿಕ್ಷಣಕ್ಕೆ ನೀಡಿದ ಮಹತ್ವವನ್ನು ಸ್ಮರಿಸಿದರು. ಸಮಾಜದ ಹಿಂದುಳಿದ ವರ್ಗಗಳ ಏಳಿಗೆಗಾಗಿ ಅವರ ಹೋರಾಟ ಸದಾಕಾಲಕ್ಕೂ ಪ್ರೇರಣೆಯಾಗಿರುತ್ತದೆ. ಕೊಲಂಬಿಯಾ ವಿಶ್ವವಿದ್ಯಾಲಯ ಮತ್ತು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ನಲ್ಲಿ ಉನ್ನತ ವಿದ್ಯಾಭ್ಯಾಸ ಪಡೆದ ಅವರು, ಜ್ಞಾನವನ್ನು ಸಮಾಜ ಪರಿವರ್ತನೆಗೆ ಬಳಸಿದರು.
ಭಾರತದ ಸಂವಿಧಾನ ರಚನೆಗೆ ಅವರು ನೀಡಿದ ಕೊಡುಗೆ ಅನನ್ಯವಾಗಿದೆ. ನಮ್ಮ ದೇಶದ ಮೂಲಭೂತ ಹಕ್ಕುಗಳು, ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ತತ್ವಗಳು ಅವರ ಚಿಂತನೆಗಳಿಂದ ರೂಪುಗೊಂಡವು. ಆದ್ದರಿಂದಲೇ ಅವರನ್ನು “ಸಂವಿಧಾನದ ಶಿಲ್ಪಿ” ಎಂದು ಕರೆಯಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಉಪಪ್ರಾಚಾರ್ಯರಾದ ಬಸವರಾಜ ಎಸ್ ಎಂ ಉಪನ್ಯಾಸಕರಾದ ಮಹಾಂತೇಶ ಎಸ್ ಎಂ ಸೋಮಶೇಖರ್, ರಾಜು ಹಾಗೂ ಸಿಬ್ಬಂದಿ ವರ್ಗದವರಾದ ಶ್ರೀಮತಿ ಪೂರ್ಣಿಮಾ ಪಾಟೀಲ್, ಮಾರುತಿ ಎನ್ ಮಿಟಿಗೇರಿ, ಶ್ರೀಮತಿ ರತ್ನ ಒಡೆಯರ್ ಗುರುಸಿದ್ದಪ್ಪ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 