ಕಾರವಾರ 09 : ಗ್ಯಾರಂಟಿ ಕಾರ್ಯಕ್ರಮಗಳುಮಹಿಳೆಯರ ಕುಟುಂಬ ನಿರ್ವಹಣೆಗೆ ನೆರವಾಗಿವೆ ಶಾಸಕ ಸತೀಶ್ ಸೈಲ್ ಹೇಳಿದರು.
ಅವರು ಗಿಡಕ್ಕೆ ನೀರು ಹಾಕುವುದರ ಮೂಲಕ ಅಮದಳ್ಳಿಯಲ್ಲಿ ಏರ್ಪಟಟ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ವೇದಿಕೆಯಲ್ಲಿದ್ದ ಮುಖ್ಯ ಅತಿಥಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಮಾತನಾಡಿ, ಮಹಿಳೆಯರು ಸಮಾಜದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸತತ ಪ್ರಯತ್ನ ಹಾಗೂ ಪರಿಶ್ರಮದಿಂದ ಉನ್ನತ ಸ್ಥಾನ ಪಡೆಯಬಹುದು. ಸಂವಿಧಾನ ಮಹಿಳೆಗೆ ಸಮಾನ ಅವಕಾಶ ಕಲ್ಪಿಸಿದೆ ಎಂದರು.ಸ್ವಚ್ಛ ಸಂಕೀರ್ಣ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರವ ಕಸ ಸಂಗ್ರಹ ವಿಂಗಡಣೆಗಾರರು, ವಾಹನ ಚಾಲಕಿಯರು, ನೀರು ಗಂಟಿಯರು, ಕ್ರೀಡೆಯಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರನ್ನು ಗಳಿಸಿರುವ ಕ್ರೀಡಾಪಟುಗಳು, ಆಶಾ ಕಾರ್ಯಕರ್ತೆಯರು ಹೀಗೆ 8 ಜನ ಮಹಿಳಾ ಸಾಧಕಿಯರಿಗೆ ಸನ್ಮಾನವನ್ನು ಮಾಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಮಹತ್ವ ಹಾಗೂ ಮಹಿಳೆಯರು ಮುಖ್ಯ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರವ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಶುಭ ಕೋರಿದರು.ವೇದಿಕೆ ಕಾರ್ಯಕ್ರಮದ ಆರಂಭದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಓಟಕ್ಕೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಚಾಲನೆ ನೀಡಿದರು
ಕ್ರೀಡೆಯಲ್ಲಿ ವಿಜೇತ ಮೂರು ವಿದ್ಯಾರ್ಥಿನಿಯರಿಗೆ ಬಹುಮಾನವನ್ನು ನೀಡಲಾಯಿತು.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದು ಮಾತನಾಡಿ,ಸರ್ಕಾರದಿಂದ ಮಹಿಳೆಯರಿಗೆ ದೊರೆಯುವ ಕಾರ್ಯಕ್ರಮಗಳು ಅವರ ಆರ್ಥಿಕ ಪ್ರಗತಿಗೆ ಕಾರಣವಾಗಿವೆ ಎಂದರು.ಅಮದಳ್ಳಿ ಗ್ರಾ .ಪಂ . ಅಧ್ಯಕ್ಷರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಉಪ ಕಾರ್ಯದರ್ಶಿ ಆಡಳಿತ ಜಿಲ್ಲಾ ಪಂಚಾಯತ್, ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು , ಸಿಬ್ಬಂದಿಗಳು, ಎಲ್ಲಾ ತಾಲೂಕಿನ ಮಹಿಳಾ ಸಾಧಕಿಯರು, ಗ್ರಾ ಪಂ ನ ಪಿಡಿಓ ಅಧಿಕಾರಿ, ಗ್ರಾ ಪಂ ನ ಸರ್ವ ಸದಸ್ಯರುಗಳು, ಸಿಬ್ಬಂದಿಗಳು, ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.ಇದೇ ಸಂದರ್ಭದಲ್ಲಿ ಮಹಿಳೆಯರ ಆರೋಗ್ಯ ನೈರ್ಮಲ್ಯದ ಬಗ್ಗೆ ಉಪನ್ಯಾಸ,ಬೀದಿ ನಾಟಕ, ಮಾಹಿತಿ ಶಿಬಿರ,ಹಾಗೂ ಜಲ ಜೀವನ್ ಮಿಷನ್ ಯೋಜನೆಯ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಕುರಿತು ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಏರಿ್ಡಸಲಾಗಿತ್ತು.ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರವಾರ, ತಾಲೂಕ ಪಂಚಾಯತ್ ಕಾರವಾರ ಹಾಗೂ ಅಮದಳ್ಳಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಶನಿವಾರ ವಿಶ್ವ ಮಹಿಳಾ ದಿನಾಚರಣೆ ಜಿಲ್ಲಾ ಮಟ್ಟದ ಕಾರ್ಯಕ್ರಮ ಏರ್ಪಟಟಿತ್ತು..