ಸಂವಿಧಾನ ದೇಶದ ಹೆಮ್ಮೆಯ ಸಂಕೇತ: ಶಾಸಕ ಮನಗೂಳಿ
Constitution is a symbol of the country's pride: MLA Managuli
ದೇವರಹಿಪ್ಪರಗಿ 24: ಸಂವಿಧಾನ ನಮ್ಮ ದೇಶದ ಹೆಮ್ಮೆಯ ಸಂಕೇತವಾಗಿದ್ದು, ಗ್ರಾಮೀಣ ಭಾಗದಲ್ಲೂ ಜಾಗೃತಿ ಅಭಿಯಾನ ನಡೆಸಬೇಕು ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಆವರಣದಲ್ಲಿ ರವಿವಾರ ಸಂಜೆ ದಸಂಸ ಡಿ.ಜಿ. ಸಾಗರ ಬಣದ ವತಿಯಿಂದ ಹಮ್ಮಿಕೊಂಡ ಸಂವಿಧಾನ ಜಾಗೃತಿ ಸಮಾವೇಶ ಹಾಗೂ ಡಿಎಸ್‌ಎಸ್ ತಾಲೂಕು ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಬರುವಂತ ದಿನಗಳಲ್ಲಿ ನೂತನ ತಾಲೂಕು ಘಟಕದ ವತಿಯಿಂದ ಸಂವಿಧಾನ ಜಾಗೃತಿ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಉದ್ಘಾಟಕರಾಗಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಮಾತನಾಡಿ, ದೇಶದ ಸಮಗ್ರ ಅಭಿವೃದ್ಧಿಗೆ ಸಂವಿಧಾನ ಜಾಗೃತಿ ಅವಶ್ಯವಾಗಿದ್ದು, ಪತಿಯೊಬ್ಬ ನಾಗರಿಕರು ಸಂವಿಧಾನ ಅರಿತು ನಡೆಯಬೇಕು. 12ನೇ ಶತಮಾನದ ಬಸವಣ್ಣನವರ ಸಮ ಸಮಾಜದ ಕಲ್ಪನೆಯನ್ನು ಸಾಕಾರಗೊಳಿಸಿದ ಸಂವಿಧಾನವು ಇಡೀ ಜಗತ್ತಿಗೆ ಮಾದರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಿಎಸ್‌ಎಸ್ ರಾಜ್ಯ ಸಂಚಾಲಕ ಡಾ. ಡಿ.ಜಿ. ಸಾಗರ ಅವರು ವಹಿಸಿ ಮಾತನಾಡಿ, ಶೋಷಿತರ ಧ್ವನಿಯಾಗಿರುವ ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ನೀಡಿದೆ. ಸಂವಿಧಾನದ ಆಶಯದಂತೆ ಆಡಳಿತ ನಡೆಯಬೇಕು ಎಂದು ಹೇಳಿದರು.ಕಾರ್ಯಕ್ರಮದ ಸಾನಿಧ್ಯವನ್ನು ಆಲಮೇಲ ವಿರಕ್ತಮಠದ ಜಗದೇವ ಮೊಲ್ಲಿಬೊಮ್ಮಯ್ಯ ಸ್ವಾಮಿಗಳು ಆಶೀರ್ವಚನ ನೀಡಿ, ಡಾ. ಬಿ.ಆರ್. ಅಂಬೇಡ್ಕರ್ ಸಮಾನತೆಗಾಗಿ ಶ್ರಮಿಸಿದ ಮಹಾನ್ ನಾಯಕರು ಎಂದು ಕೊಂಡಾಡಿದರು.ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಳ್ಳಿ, ಮಾಜಿ ಜಿಪಂ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪೂರ ಮಾತನಾಡಿದರು.
ಕಾರ್ಯಕ್ರಮವನ್ನು ಡಿಎಸ್‌ಎಸ್ ಜಿಲ್ಲಾ ಸಂಚಾಲಕ ವೈ.ಸಿ. ಮಯೂರ, ತಾಲೂಕು ಸಂಚಾಲಕ ಸಿದ್ದಾರ್ಥ ರೂಗಿ ನೇತೃತ್ವ ವಹಿಸಿದ್ದರು.ಇದಕ್ಕೂ ಮುನ್ನ ಟಿಪ್ಪುಸುಲ್ತಾನ ವೃತ್ತದಿಂದ ಭವ್ಯ ಮೆರವಣಿಗೆ ಜರುಗಿತು. ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹಾಗೂ ಡಾ. ಪ್ರಭುಗೌಡ ಲಿಂಗದಳ್ಳಿ ಮೆರವಣಿಗೆಗೆ ಚಾಲನೆ ನೀಡಿದರು.ಇದೇ ಸಂದರ್ಭದಲ್ಲಿ ಮುಖಂಡರುಗಳಾದ ಸಿದ್ದು ರಾಯಣ್ಣವರ, ಸಂಗಮೇಶ ಛಾಯಾಗೋಳ, ಬಶೀರ ಬೇಪಾರಿ, ಮಹೇಶ ಸುಣಗಾರ, ಸಂದೀಪ ಚೌರ, ಉಮೇಶ ರೂಗಿ, ಗುರುರಾಜ ಆಕಳವಾಡಿ, ಮಕ್ಬೂಲ್ ಬಾಗವಾನ, ಕಾಶಿನಾಥ ತಳಕೇರಿ,ಅರುಣ ಮಹೇಶ ಸುಣಗಾರ, ಸಂದೀಪ ಚೌರ, ಉಮೇಶ ರೂಗಿ, ಜಾನು ಗುಡಿಮನಿ, ಅರುಣ ಕೋರವಾರ, ರಾಘವೇಂದ್ರ ಗುಡಿಮನಿ ಸೇರಿದಂತೆ ಹಲವರು ಜನ ಮುಖಂಡರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 