ಪರಿಶಿಷ್ಟ ಜಾತಿಯ ಕಾಲೋನಿಯಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ
Construction of CC road begins in Scheduled Caste colony
ಹಾನಗಲ್ 17: ಸ್ಥಳೀಯ ಪುರಸಭೆಯ ಹೊರವಲಯದ ಪರಿಶಿಷ್ಟ ಜಾತಿಯ ಸುಡುಗಾಡುಸಿದ್ದ ಮತ್ತು ಡೊಂಬರ ಸಮುದಾಯದ ಜನತೆ ವಾಸಿಸುತ್ತಿರುವ ಕಾಲೋನಿಯಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ 29 ಲಕ್ಷ ಅನುದಾನದಲ್ಲಿ ಸಿಸಿರಸ್ತೆ ಮತ್ತು ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ಮಂಗಳವಾರ ಸಂಜೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ಹಾನಗಲ್ ನಗರ ವ್ಯಾಪ್ತಿಯಲ್ಲಿ ನಗರೋತ್ಥಾನದಡಿ 5 ಕೋಟಿ,ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಯಡಿ 5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಮಳಗಿ ಧರ್ಮಾ ಜಲಾಶಯದಿಂದ ನೇರವಾಗಿ ಪೈಪಲೈನ್ ಮೂಲಕ ಆನಿಕೆರೆಗೆ ನೀರು ಹರಿಸುವ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನತೆ ವಾಸಿಸುತ್ತಿರುವ ಕಾಲೋನಿಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಶಾಸಕ ಮಾನೆ ಇದೇ ಸಂದರ್ಭದಲ್ಲಿ ತಿಳಿಸಿದರು.
ಪುರಸಭೆ ಅಧ್ಯಕ್ಷೆ ರಾಧಿಕಾ ದೇಶಪಾಂಡೆ, ಉಪಾಧ್ಯಕ್ಷೆ ವೀಣಾ ಗುಡಿ, ಸದಸ್ಯ ಸುರೇಶ ನಾಗಣ್ಣನವರ, ಅಕ್ಕಿಆಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಮುಖಂಡರಾದ ಗುರುರಾಜ ನಿಂಗೋಜಿ, ರಾಜೂ ಗುಡಿ, ರವಿ ದೇಶಪಾಂಡೆ, ಮುಖ್ಯಾಧಿಕಾರಿ ವೈ.ಕೆ.ಜಗದೀಶ್, ಯೋಜನಾಧಿಕಾರಿ ಶಿವಾನಂದ ಕ್ಯಾಲಕೊಂಡ, ಮಾರುತಿ ತಾಂದಳೆ, ಸೋಮಣ್ಣ ಕೂಡಲಗಿ, ವೀರೇಶ ಕೂಡಲಗಿ, ಮಂಜು ಡೊಂಬರ, ದುರುಗಪ್ಪ ವಿಭೂತಿ, ದುರುಗಪ್ಪ ಕರಿಯವರ ಸೇರಿದಂತೆ ಅನೇಕರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 