ನೂತನ ಮಲ್ಟಿ ಸ್ಪೆಶ್ಯಾಲಿಟಿ ಆಸ್ಪತ್ರೆ ನಿರ್ಮಾಣ
ಲೋಕದರ್ಶನ ವರದಿ
ಘಟಪ್ರಭಾ 29: ಸ್ಥಳೀಯ ಜೆ.ಜಿ ಸಹಕಾರಿ ಆಸ್ಪತ್ರೆಯ ಆವರಣದಲ್ಲಿ ಸುಮಾರು 24 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಮಲ್ಟಿ ಸ್ಪೆಶ್ಯಾಲಿಟಿ ಆಸ್ಪತ್ರೆಯ ಕಟ್ಟಡದ ಅಡಿಗಲ್ಲು ಸಮಾರಂಭವನ್ನು ಹುಬ್ಬಳ್ಳಿಯ ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೇಂದ್ರ ಮಹಾಸ್ವಾಮಿಗಳು ಬುಧವಾರ ನೆರವೇರಿಸಿದರು.
ನಂತರ ಮಾತನಾಡಿದ ಅವರು ಈ ಭಾಗದ ಜನರ ಆರೋಗ್ಯದ ದೃಷ್ಠಿಯಿಂದ ಸಂಸ್ಥೆ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿದೆ. ಆಸ್ಪತ್ರೆ ಅಭಿವೃದ್ಧಿಯ ದೃಷ್ಠಿಯಿಂದ ಸುಮಾರ 24 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನೂತನ ಮಲ್ಟಿ ಸ್ಪೆಶ್ಯಾಲಿಟಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದ್ದು, ಈ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.
ಸಂಸ್ಥೆಯ ಅಧ್ಯಕ್ಷರಾದ ಬಿ.ಆರ್.ಪಾಟೀಲ(ನಾಗನೂರ), ಉಪಾಧ್ಯಕ್ಷ ಎ.ಎನ್.ಕರಲಿಂಗನವರ, ನಿರ್ದೇಶಕರಾದ ಅಪ್ಪಯಪ್ಪಾ ಬಡಕುಂದ್ರಿ, ಚಂದ್ರಶೇಖರ ಕಾಡದವರ, ಸುರೇಶ ಕಾಡದವರ, ಆರ್.ಟಿ.ಶಿರಾಳಕರ, ಶಿವನಗೌಡಾ ಪಾಟೀಲ, ಎಸ್.ಎಂ.ಚಂದರಗಿ, ಬಿ.ಎಂ.ಬಂಡಿ, ಎಸ್.ಎಸ್.ದಳವಾಯಿ, ಆರ್.ಜೆ.ಪತ್ತಾರ, ಆಶಾದೇವಿ ಕತ್ತಿ, ಪೂಜಾ ಇನಾಮದಾರ, ಸಿಇಓ ಬಿ.ಕೆ.ಎಚ್ ಪಾಟೀಲ, ಮ್ಯಾನೇಜರ ಎಲ್.ಎಸ್.ಹಿಡಕಲ್ ಸೇರಿದಂತೆ ಸಂಸ್ಥೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಶಿಕ್ಷಕ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 