ಬೆಳಗಾವಿ ಡಿ.13: ಅರಸೀಕೆರೆಯ ಹಬ್ಬನಘಟ್ಟ ಕಾವಲ್(ಗೀಜಿಹಳ್ಳಿ) ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ಖಾಸಗಿಯವರು ಕೋಲ್ಡ್ ಸ್ಟೋರೇಜ್ ನಿರ್ಮಿಸಿ, ನಿರ್ವಹಣೆ ಮಾಡಲು ಮುಂದೆ ಬಂದರೆ ಕೃಷಿ ಮಾರುಕಟ್ಟೆ ಸ್ಥಳವನ್ನು ಲೀಜಿಗೆ ನೀಡುವುದಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ಸದನದಲ್ಲಿ ಹೇಳಿದರು.
ಬೆಳಗಾವಿ ಸುವರ್ಣಸೌಧಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ, ಅರಸಿಕೆರೆ ಶಾಸಕ ಶಿವಲಿಂಗೇಗೌಡ.ಕೆ.ಎಂ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.
ಹಬ್ಬನಘಟ್ಟ ಕಾವಲ್ ಉಪ ಮಾರುಕಟ್ಟೆ ಪ್ರಾಂಗಣದಲ್ಲಿ ರೂ.5 ಕೋಟಿ ವೆಚ್ಚದಲ್ಲಿ ಕೋಲ್ಡ್ ಸ್ಟೋರೇಜ್ ಸ್ಥಾಪಿಸಲು ಹೆಚ್ಚುವರಿ ಅನುದಾನ ಕೋರಿ ಹಣಕಾಸು ಇಲಾಖೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರ ಮಧ್ಯಯೇ ಖಾಸಗಿಯವರು ಮುಂದೆ ಬಂದರೆ ಸ್ಥಳ ನೀಡುವುದಾಗಿ ಸಚಿವ ಶಿವಾನಂದ ಎಸ್ ಪಾಟೀಲ್ ತಿಳಿಸಿದರು.
2024-25ನೇ ಸಾಲಿನಲ್ಲಿ ಆರ್ಥಿಕ ಇಲಾಖೆ ಎ.ಪಿ.ಎಂ.ಸಿಗಳಲ್ಲಿ ಕೋಲ್ಡ್ ಸ್ಟೋರೇಜ್ ಮತ್ತು ಇನ್ನಿತರ ಮೂಲಭೂತ ಸೌಕರ್ಯ ಒದಗಿಸಲು ರೂ.144.75 ಕೋಟಿ ಅನುದಾನ ಒದಗಿಸಿತ್ತು. ಆದರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸದಸ್ಯರು, ಸಚಿವರು, ಶಾಸಕರುಗಳಿಂದ ರೈತರ ಬೆಳೆದ ಬೆಳಗೆ ಯೋಗ್ಯ ದರ ಮತ್ತು ಮಾರುಕಟ್ಟೆ ಒದಗಿಸಲು, ಮಾರುಕಟ್ಟೆಗೆ ಬರುವ ಹೆಚ್ಚಿನ ಆವಕಗಳನ್ನು ಶೇಖರಿಸಲು ಹೆಚ್ಚಿನ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ಬೇಡಿಕೆ ಸಲ್ಲಿಸಿದ್ದರು. ಆದ್ದರಿಂದ ರೂ.354.75 ಕೋಟಿಗಳ ಹೆಚ್ಚುವರಿ ಅನುದಾನ ಮಂಜೂರು ಮಾಡುವಂತೆ ಆರ್ಥಿಕ ಇಲಾಖೆ ಕೋರಲಾಗಿದೆ ಎಂದು ಸಚಿವ ಶಿವಾನಂದ ಎಸ್ ಪಾಟೀಲ್ ಮಾಹಿತಿ ನೀಡಿದರು.
ಶಾಸಕ ಶಿವಲಿಂಗೇಗೌಡ.ಕೆ.ಎಂ ಮಾತನಾಡಿ ಪದವಿ ಪಡೆದ ಹಲವು ಜನರು ಇಂದು ಪಶುಸಂಗೋಪನೆ ಹಾಗೂ ತೋಟಗಾರಿಕೆ ಕಡೆಗೆ ಮುಖ ಮಾಡುತ್ತಿದ್ದಾರೆ. ಇವರು ಉತ್ಪಾದಿಸಿದ ತೋಟಗಾರಿಕೆ ಬೆಳೆಗಳಿಗೆ ಸೂಕ್ತ ಬೆಳೆ ಲಭಿಸಿದೇ ನಿರಾಶೆ ಹೊಂದುತ್ತಿದ್ದಾರೆ. ಮಾರುಕಟ್ಟೆಗಳಲ್ಲಿ ಒಮ್ಮೆಗೆ ಹೆಚ್ಚಿನ ದಾಸ್ತಾನು ಬಂದರೆ ಸಂಗ್ರಹಿಸಿ ಇಡಲು ಯಾವುದೇ ವ್ಯವಸ್ಥೆಗಳು ಇಲ್ಲ. ಆದ್ದರಿಂದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಮಾಡುವುದು ಅಗತ್ಯವಾಗಿದೆ ಎಂದು ಸಚಿವ ಶಿವಾನಂದ ಎಸ್ ಪಾಟೀಲ್ ಮನವಿ ಮಾಡಿದರು.