ತಡಸದಲ್ಲಿ ಆರೋಗ್ಯ ಮಂದಿರ ಹಾಗೂ ದೇವಸ್ಥಾನ ಕಟ್ಟಡ ಕಾಮಗಾರಿಗೆ ಚಾಲನೆ
Construction of health center and temple to begin in Tadasa
ಬ್ಯಾಡಗಿ 13: ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಆರೋಗ್ಯ ಸೇವೆಗಳು ಲಭ್ಯವಾದರೆ ಜನರು ನಗರ ಪ್ರದೇಶಗಳಿಗೆ ಅಲೆಯುವ ಅವಶ್ಯಕತೆ ಇರುವುದಿಲ್ಲ. ಆದ್ದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಆರೋಗ್ಯ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ತಾಲೂಕಿನ ತಡಸ ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮತ್ತು ತಡಸ ಗ್ರಾಮ ಪಂಚಾಯಿತಿ ವತಿಯಿಂದ ?45 ಲಕ್ಷ ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಆಯುಷ್ಮಾನ್ ಆರೋಗ್ಯ ಮಂದಿರ ಕಟ್ಟಡದ ಭೂಮಿ ಪೂಜೆ ಹಾಗೂ ಗ್ರಾಮದೇವತೆ ದೇವಸ್ಥಾನದ ನೂತನ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಡಸ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ಸಣ್ಣ ಗ್ರಾಮಗಳಿದ್ದು, ಕೂಲಿ ಕಾರ್ಮಿಕರು ಹಾಗೂ ಬಡವರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೂ ಜನರು ಪಟ್ಟಣಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ. ಇದನ್ನು ತಪ್ಪಿಸಲು ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಮುಂದಾಗಿದ್ದು, ಸುಸಜ್ಜಿತ ಕಟ್ಟಡವನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಶಾಸಕರಾದ ಬಳಿಕ ಆರೋಗ್ಯ ಕ್ಷೇತ್ರದ ಸೌಲಭ್ಯಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದೇನೆ. ಇತ್ತೀಚೆಗೆ ಮೊಟೇಬೆನ್ನೂರು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರಾಗಿದ್ದು, ಗ್ರಾಮೀಣ ಜನರಿಗೆ ಗುಣಮಟ್ಟದ ಚಿಕಿತ್ಸೆ ದೊರೆಯಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು.
ಗ್ರಾಮಗಳ ಅಭಿವೃದ್ಧಿಯ ಜೊತೆಗೆ ದೇವಸ್ಥಾನಗಳ ಅಭಿವೃದ್ಧಿಗೂ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ. ರಾಜ್ಯ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಜತೆಗೆ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಗ್ರಾಮಸ್ಥರ ಬೇಡಿಕೆಯಂತೆ ತಡಸ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣಕ್ಕೂ ಸಹಕಾರ ನೀಡಲಾಗುವುದು. ಅಲ್ಲದೆ ಗಂಗಾಪರಮೇಶ್ವರಿ ದೇವಸ್ಥಾನಕ್ಕೆ ?5 ಲಕ್ಷ ಹಾಗೂ ಗ್ರಾಮದೇವತೆ ದೇವಸ್ಥಾನಕ್ಕೆ ಈಗಾಗಲೇ ?50 ಲಕ್ಷ ಅನುದಾನ ಒದಗಿಸಲಾಗಿದೆ. ಮುಂದೆಯೂ ಸಾಧ್ಯವಾದಷ್ಟು ನೆರವು ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ದಾನಪ್ಪ ಚೂರಿ, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಶಂಭನಗೌಡ ಪಾಟೀಲ, ರುದ್ರ್ಪ ಹೊಂಕಣದ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಸದಸ್ಯ ಕೇಶವ ಕಿತ್ತೂರು, ಗ್ರಾಮ ಪಂಚಾಯಿತಿ ಅಧ್ಯಕ್ಷ ದೀಲೀಪ್ ಕುಮಾರ ಮೇಗಳಮನಿ, ಚಂದ್ರ್ಪ ದೊಡ್ಡಮನಿ, ಹೊನ್ನಪ್ಪ ಸಣ್ಣಬಾಕಿ, ಹನುಮಂತಪ್ಪ ಸಣ್ಣಬಾಕಿ, ಸಿದ್ದನಗೌಡ ಬೇಗೂರ, ತೀರಕನಗೌಡ ಪಾಟೀಲ, ಬೀರನಗೌಡ ಪಾಟೀಲ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 