ಗ್ರಾಹಕರು ಕುಂದುಕೊರತೆಗಳ ನಿವಾರಿಸಿಕೊಳ್ಳುವ ಹಕ್ಕು ಹೊಂದಿರುತ್ತಾರೆ: ಸಚಿವ ಕೆಹೆಚ್. ಮುನಿಯಪ್ಪ
ಬೆಳಗಾವಿ 24: ಗ್ರಾಹಕರಿಗೆ ಸುರಕ್ಷತೆಯ, ಮಾಹಿತಿ ಪಡೆಯುವ ಹಾಗೂ ಕುಂದುಕೊರತೆಗಳನ್ನು ನಿವಾರಿಸಿಕೊಳ್ಳುವ ಹಕ್ಕುಗಳನ್ನು ಹೊಂದಿರುತ್ತಾರೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಹೇಳಿದರು. ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಮಂಗಳವಾರ (ಡಿ.24)ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ, ಕಾನೂನು ಮಾಪನ ಶಾಸ್ತ್ರ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜರುಗಿದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಗ್ರಾಹಕರ ಶಿಕ್ಷಣದ ಹಕ್ಕಿನ ಜೊತೆಗೆ ಮೂಲಭೂತ ಅಶ್ಯಕತೆಗಳನ್ನು ಪಡೆಯುವ ಹಕ್ಕು, ಮಾಲಿನ್ಯ ಮುಕ್ತ ಪರಿಸರವನ್ನು ಪಡೆಯುವ ಹಕ್ಕುಗಳನ್ನು ಪಡೆದಿರುತ್ತಾರೆ ಎಂದರು.ಗ್ರಾಹಕರು ಖರೀದಿಸುವ ಸರಕು, ಸಾಮಗ್ರಿಗಳ ತೂಕದಲ್ಲಿ ಯಾವುದೇ ವ್ಯತ್ಯಾಸವಿಲ್ಲದೆ ಸಮರ್ಕವಾಗಿ ವಿತರಣೆ ಮಾಡುವುದು ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದರು.ಆಧುನಿಕ ಮಾರುಕಟ್ಟೆ ಸಿದ್ದಾಂತವು ಗ್ರಾಹಕರನ್ನು ಮಾರುಕಟ್ಟೆಯ ರಾಜನೆಂದು ಪರಿಗಣಿಸಿದೆ. ಮಾರುಕಟ್ಟೆಯ ಎಲ್ಲಾ ಕಾರ್ಯ ಚಟುವಟಿಕೆಗಳು ಗ್ರಾಹಕನ ಅವಶ್ಯಕತೆಗಳು ಮತ್ತು ಅಭಿಲಾಷೆಗಳನ್ನು ತೃಪ್ತಿಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.ನ್ಯಾಯವಾದಿಗಾಳದ ಎನ್.ಆರ್.ಲಾತೂರ ಅವರು ರಾಷ್ಟ್ರೀಯ ಗ್ರಾಹಕರ ದಿನಾವರಣೆ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಗ್ರಾಹಕರಿಗಾಗಿ ಇರುವಂತಹ ಹಕ್ಕುಗಳ ಕುರಿತು ವಿವರಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಅಣ್ಣಾಸಾಹೇಬ ಸದಲಗೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪಿ.ಮುರಳಿಮೋಹನ ರೆಡ್ಡಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರುಗಳಾದ ಸುನಂದಾ ಕಾದ್ರೋಳಿಮಠ, ಗೀರೀಶ್ ಪಾಟೀಲ, ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾಅಂಕಿತ ಅಧಿಕಾರಿ ಡಾ.ಚೇತನ ಕಂಕಣವಾಡಿ, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ ಉಪಸ್ಥಿತರಿದ್ದರು.