ಘಟಪ್ರಭಾ ಸಹಕಾರಿ ಸಕ್ಕರೆ ಕಾಖರ್ಾನೆಯ ಅಧ್ಯಕ್ಷರಾಗಿ ಪಾಟೀಲ ಉಪಾಧ್ಯಕ್ಷರಾಗಿ ಮಹಾರಡ್ಡಿ ಅವಿರೋಧ ಆಯ್ಕೆ
ಘಟಪ್ರಭಾ 12: ಘಟಪ್ರಭಾ ಸಹಕಾರಿ ಸಕ್ಕರೆ ಕಾಖರ್ಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಮುಂದಿನ 5 ವರ್ಷಗಳ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಕ್ಕರೆ ಕಾಖರ್ಾನೆಯ ಕಾಯರ್ಾಲಯದಲ್ಲಿ ಮಂಗಳವಾರದಂದು ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಉಭಯತರು ಅವಿರೋಧವಾಗಿ ಆಯ್ಕೆಯಾದರೆಂದು ಚುನಾವಣಾಧಿಕಾರಿಯಾಗಿದ್ದ ಗೋಕಾಕ ತಹಶೀಲ್ದಾರ ಜಿ.ಎಸ್. ಮಳಗಿ ಅವರು ಪ್ರಕಟಿಸಿದರು.
ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಅಶೋಕ ಪಾಟೀಲ ಅವರು, ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾಖರ್ಾನೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಲಾಗುವುದು. ಈ ಭಾಗದ ಶಕ್ತಿಯಾಗಿರುವ ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಶಾಸಕರಾದ ಸತೀಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ಖ್ಯಾತ ಉದ್ಯಮಿ ಲಖನ್ ಜಾರಕಿಹೊಳಿ ಸಹೋದರರ ಮಾರ್ಗದರ್ಶನದಲ್ಲಿ ಕಾಖರ್ಾನೆಯ ಒಳತಿಗಾಗಿ ದುಡಿದು ಜಿಲ್ಲೆಯಲ್ಲಿಯೇ ಮಾದರಿ ಕಾಖರ್ಾನೆಯನ್ನಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ರೈತರ ಸಹಕಾರವು ಸದಾ ಕಾಖರ್ಾನೆಯ ಮೇಲಿರಲಿ ಎಂದು ಹೇಳಿದರು.
ನಿದರ್ೇಶಕರಾದ ಬಸಗೌಡ ಪಾಟೀಲ, ಕೆಂಚನಗೌಡ ಪಾಟೀಲ, ಕೃಷ್ಣಪ್ಪ ಬಂಡ್ರೊಳ್ಳಿ, ಶಿದ್ಲಿಂಗ ಕಂಬಳಿ, ಲಕ್ಷ್ಮಣ ಗಣಪ್ಪಗೋಳ, ಗಿರೀಶ ಹಳ್ಳೂರ, ಶಿವಲಿಂಗ ಪೂಜೇರಿ, ಭೂತಪ್ಪ ಗೋಡೇರ, ಎಂ.ಆರ್.ಭೋವಿ, ಮಾಳಪ್ಪ ಜಾಗನೂರ, ಮಲ್ಲಿಕಾಜರ್ುನ ಕಬ್ಬೂರ, ಲಕ್ಕವ್ವ ಬೆಳಗಲಿ, ಯಲ್ಲವ್ವ ಸಾರಾಪೂರ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ವರ್ತಕ ವಿಕ್ರಮ ಅಂಗಡಿ, ಅರ್ಬನ್ ಬ್ಯಾಂಕ ಅಧ್ಯಕ್ಷ ಬಸವರಾಜ ಕಲ್ಯಾಣಶೆಟ್ಟಿ, ಕಬ್ಬು ಅಭಿವೃದ್ಧಿ ಅಧಿಕಾರಿ ಜೆ.ಆರ್. ಬಬಲೇಶ್ವರ ಹಾಗೂ ರೈತ ಬಾಂಧವರು ಉಪಸ್ಥಿತರಿದ್ದರು.
ತಹಶೀಲ್ದಾರ ಜಿ.ಎಸ್.ಮಳಗಿ ಅವರು ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 