ಹಿಮಾಚಲ ಪ್ರದೇಶದಲ್ಲಿ ಮೇ 31 ರವರೆಗೆ ಕರ್ಫ್ಯೂ ಮುಂದುವರಿಕೆ

ಶಿಮ್ಲಾ, ಮೇ 18, ಹಿಮಾಚಲ ಪ್ರದೇಶದಲ್ಲಿ ಮೇ 31 ರವರೆಗೆ ಕರ್ಫ್ಯೂ ಮುಂದುವರಿಸಲಾಗಿದೆ  ಕೊರೊನಾ ಸೋಂಕಿನ ಪ್ರಕರಣಗಳ ಹೆಚ್ಚುತ್ತಿರುವ ಕಾರಣ ಕರ್ಫ್ಯೂ ಮುಂದುವರಿಸಲಾಗಿದೆ ಎಂದು ಮುಖ್ಯಮಂತ್ರಿ ಜೈರಾಮ್ ಠಾಕೂರ್ ಹೇಳಿದ್ದಾರೆ.ಇತರ ರಾಜ್ಯಗಳಲ್ಲಿ ಸಿಲುಕಿದ್ದವರು ರಾಜ್ಯಕ್ಕೆ ವಾಪಸಾದ ನಂತರ ಸೊಂಕಿನ ಪ್ರಕರಣಗಳು ಹೆಚ್ಚಾಗಿದ್ದು, ಇನ್ನೂ 60 ಸಾವಿರಕ್ಕೂ ಹೆಚ್ಚು ಜನರು ರಾಜ್ಯಕ್ಕೆ ವಾಪಸಾಗುವ ಸಾಧ್ಯತೆ ಇದ್ದು ಸೋಂಕಿನ ಪ್ರಕರಣಗಳೂ ಹೆಚ್ಚಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಇನ್ನೂ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 80 ಕ್ಕೆ ಏರಿಕೆಯಾಗಿದೆ.