ಮಕ್ಕಳ ಶೈಕ್ಷಣಿಕ ಪ್ರಗತಿಗೆ ನಿರಂತರ ಕಲಿಕೆ ಅಗತ್ಯ
Continuous learning is essential for children's academic progress
ಹೂವಿನ ಹಡಗಲಿ 10: ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕೆಲಸ ನಿರಂತರವಾಗಿ ಆಗಬೇಕು ಎಂದು ಡಯಟ್ ಅಧಿಕಾರಿಗಳಾದ ಮಯೂರ್ ಗದುಗಿನ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಸೊಪ್ಪಿನ ವೀರಮ್ಮ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 5 ದಿನಗಳ ಕಾಲ ಆಯೋಜಿಸಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಮರುಸಿಂಚನ ಜ್ಞಾನಸೇತು ಮೌಲ್ಯ ಶಿಕ್ಷಣ ಮಕ್ಕಳ ಹಕ್ಕುಗಳ ರಕ್ಷಣೆ, ಪೋಕ್ಸೋ ಕಾಯ್ದೆ ಕುರಿತು ತರಬೇತಿ ಶಿಬಿರದ ಸಮಾರೋಪದಲ್ಲಿ ಮಾತನಾಡಿದರು.ಶಿಬಿರದಲ್ಲಿ ಪಡೆದ ಜ್ಞಾನವನ್ನು ಶಾಲೆಯ ಮಕ್ಕಳಿಗೆ ಪ್ರಸರಿಸಬೇಕು ಎಂದು ಹೇಳಿದರು.
ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಶಿಕ್ಷಕರ ಬೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ತರಬೇತಿ ಶಿಬಿರ ಏರಿ್ಡಸಲಾಗಿದೆ. ಮಗುವಿನ ವಿಕಾಸಕ್ಕೆ ಪೂರಕವಾದ ವಾತಾವರಣ ಶಾಲೆಯಲ್ಲಿ ಕಲ್ಪಿಸಬೇಕು. ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿರಿ ಎಂದರು.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಗಳಾದ ಬಿ ಆರ್ ಪಿ ಸಚಿನ್ ಆರಾಧ್ಯ ಸಿ ಆರ್ ಪಿ ವೀರೇಶ್ ಬಗಲಿಚಿದಾನಂದ, ಕೊಟ್ರೇಶ್,ಮುಂಜುನಾಥ, ಸುನೀಲ್, ತರಬೇತಿ ನೀಡಿದರು. ತಾಲೂಕಿನ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳ 6 ರಿಂದ 8 ನೇ ತರಗತಿ ಬೋಧಿಸುವ 240ಶಿಕ್ಷಕರು ಇದರ ಪ್ರಯೋಜನ ಪಡೆದುಕೊಂಡರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 