ಶಿಕ್ಷಕರ ಸಮಸ್ಯೆಗಳಿಗೆ ನಿರಂತರ ಹೋರಾಟ: ಹನುಮಂತಪ್ಪ
Continuous struggle for teachers' issues: Hanumanthappa
ಲೋಕದರ್ಶನ ವರದಿ
ಕಂಪ್ಲಿ, ಜು.31: ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಂಪ್ಲಿ ತಾಲೂಕು ಅಧ್ಯಕ್ಷ ಹನುಮಂತಪ್ಪ ಹೇಳಿದರು.
ಪಟ್ಟಣದ ಅಂಬೇಡ್ಕರ್ ವೃತ್ತದ ಸಮೀಪದ ಕೆರೆ ಶಾಲೆಯಲ್ಲಿ ಗುರುವಾರ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿದ್ದು, ಶಿಕ್ಷಕರ ಹಿತಾಸಕ್ತಿಗಾಗಿ ಸಂಘವು ಸದಾ ಬದ್ಧವಾಗಿರುತ್ತದೆ. ಸಂಘದ ಮೂಲಕ ತಾಲೂಕಿನ ಪ್ರತಿಯೊಬ್ಬ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವುಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಹೇಳಿದರು.
ಸಂಘವು ವ್ಯಕ್ತಿಗಿಂತಲೂ ದೊಡ್ಡದು. ಸಂಘದ ಐಕ್ಯತೆ ಮತ್ತು ಸಂಘಟಿತ ಹೋರಾಟದಿಂದಲೇ ಶಿಕ್ಷಕರ ಬೇಡಿಕೆಗಳಿಗೆ ನ್ಯಾಯ ದೊರೆಯಲಿದೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯದಂತೆ ನಡೆದ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು, ಎಲ್ಲ ಶಿಕ್ಷಕರು ಸಂಘದ ಸದಸ್ಯತ್ವ ಪಡೆದು ಸಂಘವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹೆಚ್. ದೊಡ್ಡಬಸಪ್ಪ ಮಾತನಾಡಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಈ ವೇಳೆ ನೂತನ ತಾಲೂಕು ಅಧ್ಯಕ್ಷ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ಹೆಚ್. ಜಡಿಯಪ್ಪ, ಖಜಾಂಚಿ ಐ. ಗಂಗಮ್ಮ, ಗೌರವಾಧ್ಯಕ್ಷ ಸಿ.ಕೆ. ರಾಮಚಂದ್ರ್ಪ, ಉಪಾಧ್ಯಕ್ಷರಾದ ಸುನೀತಾ ಪೂಜಾರ್, ಕೆ. ಚಂದ್ರಶೇಖರ್, ಸಂಘಟನಾ ಕಾರ್ಯದರ್ಶಿ ಕೆ. ವೀರೇಶ್, ಅಗಲಿ ನಾಗರತ್ನ, ಸಹ ಕಾರ್ಯದರ್ಶಿ ಮಾಲಿಕ್, ಮರಿಸ್ವಾಮಿ ಸೇರಿದಂತೆ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
ಜಿಲ್ಲಾ ಸಂಘದ ನಾಮನಿರ್ದೇಶಿತ ಸದಸ್ಯರು ಹಾಗೂ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪದಾಧಿಕಾರಿಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 