ಶಿರಹಟ್ಟಿ ತಾಲ್ಲೂಕಿನ ರೈತರ ಸಮಸ್ಯೆಗಳ ಪರಿಹಾರಕ್ಕೆ ನಿರಂತರ ಹೋರಾಟ: ಬಿ.ಟಿ. ಚಂದ್ರಶೇಖರ್
Continuous struggle to resolve the problems of farmers in Shirahatti taluk: B.T. Chandrashekhar
ಶಿರಹಟ್ಟಿ 29: ರಾಜ್ಯ ರೈತೋದಯ ಹಸಿರು ಸೇನೆ ರಾಜ್ಯಾಧ್ಯಕ್ಷ ಹಾಗೂ 1008 ಬಡ ರೈತರ ಕಲ್ಯಾಣೋತ್ಸವದ ನೇತೃತ್ವ ವಹಿಸಿರುವ ಬಿ.ಟಿ. ಚಂದ್ರಶೇಖರ್ ಅವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡುವ ಕಾರ್ಯಕ್ರಮದ ಅಂಗವಾಗಿ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.
ಗ್ರಾಮದ ಕೆರೆಯನ್ನು ಪರೀಶೀಲಿಸಿದ ಅವರು, ರೈತರೊಂದಿಗೆ ಜಮೀನುಗಳಿಗೆ ತೆರಳುವ ರಸ್ತೆ, ನೀರಾವರಿ ಹಾಗೂ ಮೂಲಸೌಕರ್ಯ ಸಮಸ್ಯೆಗಳ ಕುರಿತು ಚರ್ಚಿಸಿದರು. ರೈತರು ತಮ್ಮ ವಿವಿಧ ಸಮಸ್ಯೆಗಳನ್ನು ಅವರ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ಟಿ. ಚಂದ್ರಶೇಖರ್, "ಶಿರಹಟ್ಟಿ ತಾಲ್ಲೂಕಿನಲ್ಲಿ ಕುಡಿಯುವ ನೀರು, ನೀರಾವರಿ ಹಾಗೂ ರಸ್ತೆ ಸೇರಿದಂತೆ ಹಲವು ಸಮಸ್ಯೆಗಳು ಇವೆ. ಈ ಭಾಗಕ್ಕೆ ಸರ್ಕಾರದಿಂದ ಹೆಚ್ಚಿನ ಅನುದಾನ ದೊರೆಯಬೇಕು. ಈ ಕುರಿತು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕೆ ನಿರಂತರವಾಗಿ ಹೋರಾಟ ನಡೆಸುತ್ತೇನೆ" ಎಂದು ಭರವಸೆ ನೀಡಿದರು.
ತಾಲ್ಲೂಕಿನ ಎಲ್ಲ ಗ್ರಾಮಗಳ ರೈತರ ಸಮಸ್ಯೆಗಳನ್ನು ಪರಿಹರಿಸಲು ಸಂಘಟನೆಯ ಮೂಲಕ ನಿರಂತರ ಪ್ರಯತ್ನ ಮುಂದುವರಿಸಲಾಗುವುದು ಎಂದ ಅವರು, ರೈತರು ಸಹ ಸಹಕಾರ ನೀಡುವಂತೆ ಮನವಿ ಮಾಡಿದರು.
ರೈತರು ಸಹ ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟನೆಯೊಂದಿಗೆ ಕೈಜೋಡಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ರೈತೋದಯ ಹಸಿರು ಸೇನೆಯ ಪದಾಧಿಕಾರಿಗಳು ಹಾಗೂ ಸೂರಣಗಿ ಗ್ರಾಮದ ನೂರಾರು ರೈತ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 