ಬೀದರ್ 29: ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಬೀದರ್ನ 26 ವರ್ಷದ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತನ ನಿವಾಸಕ್ಕೆ ಬೀದರ್ ಜಿಲ್ಲಾ ಉಸ್ತುವಾರಿ ಭೇಟಿ ನೀಡಿದರು. ಮೃತನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಸಚಿವರು, ಖಂಡ್ರೆ ಸಾಂತ್ವನ ಹೇಳಿ ಸಾವಿಗೆ ಕಾರಣರಾದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸರ್ಕಾರವು ನ್ಯಾಯದ ಪರವಾಗಿದೆ ಮತ್ತು ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುತ್ತದೆ. ಸರ್ಕಾರ ನಿಮ್ಮೊಂದಿಗಿದೆ ಎಂದು ಭರವಸೆ ನೀಡಿದರು. ವೈಯಕ್ತಿಕ ಹಾಗೂ ಸರ್ಕಾರದಿಂದ ಜಂಟಿಯಾಗಿ 10 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದರು. ಅಲ್ಲದೆ, ಮೃತನ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದರು.
ಮೃತ ಗುತ್ತಿಗೆದಾರ ಸಚಿನ್ ಮನೆಗೆ ಈಶ್ವರ ಖಂಡ್ರೆ ಭೇಟಿ ಸಂದರ್ಭದಲ್ಲಿ ಜೊತೆಯಲ್ಲಿದ್ದ ಪೊಲೀಸರ ವಿರುದ್ಧ ಸಚಿನ್ ಕಾಣೆಯಾಗಿರುವ ಬಗ್ಗೆ ದೂರು ಕೊಡಲು ಠಾಣೆಗೆ ಹೋದಾಗ ಪೊಲೀಸರು ಸ್ಪಂದಿಸಲಿಲ್ಲ. ದೂರು ಸ್ವೀಕರಿಸಿದ್ದರೆ, ಈ ಅನಾಹುತವನ್ನು ತಡೆಯಬಹುದಿತ್ತು. ಈಗೇಕೆ ಪೊಲೀಸರು ಮನೆಗೆ ಬಂದಿದ್ದಾರೆ. ಅವರನ್ನು ಹೊರಗೆ ಕಳುಹಿಸಿ ಎಂದು ಸಚಿವರ ಸಮ್ಮುಖದಲ್ಲೇ ಸಚಿನ್ ಸಾವಿಗೆ ಪೊಲೀಸರೇ ಕಾರಣ ಎಂದು ಸಚಿನ್ ಅವರ ಸಹೋದರಿಯರು ತೀವ್ರ ಆಕ್ರೋಶ ಹೊರಹಾಕಿದರು. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಡಿವೈಎಸ್ಪಿ ಜೆಎಸ್ ನ್ಯಾಮೆಗೌಡ ಸೇರಿದಂತೆ ಇತರ ಪೊಲೀಸರು ಮನೆಯಿಂದ ಹೊರನಡೆದರು.
ನಾನು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಕೆಲವು ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಪ್ಪಿತಸ್ಥರ ವಿರುದ್ದ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.
26 ವರ್ಷದ ಗುತ್ತಿಗೆದಾರ ಸಚಿನ್ ಪಾಂಚಾಳ್ ಡಿಸೆಂಬರ್ 26ರಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ತಮ್ಮ ಸಾವಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ ಸೇರಿದಂತೆ ಇತರೆ 8 ಮಂದಿ ಕಾರಣ ಎಂದು ಡೆತ್ನೋಟ್ನಲ್ಲಿ ಆರೋಪಿಸಿದ್ದರು.