ಜೂನ್ 6ಕ್ಕೆ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್-ರಿಸರ್ಚ್ ಕಾಲೇಜಿನಲ್ಲಿ ಘಟಿಕೋತ್ಸವ
Convocation ceremony at Jain College of Engineering-Research College on June 6th
ಲೋಕದರ್ಶನ ವರದಿ
ಬೆಳಗಾವಿ04 : ಇಲ್ಲಿನ ಉದ್ಯಮಬಾಗದಲ್ಲಿರುವ ಪ್ರಸಿದ್ಧ ತಾಂತ್ರಿಕ ಸಂಸ್ಥೆಯಾದ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ರಿಸರ್ಚ್ (ಎಅಇಖ) ಕಾಲೇಜಿನ ಘಟಿಕೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಸರ್ಟಿಫಿಕೇಟ್ ವಿತರಣೆ ಸಮಾರಂಭವನ್ನು ಜೂನ್ 06 ರ ಶನಿವಾರ ಆಯೋಜಿಸಲಾಗಿದೆ ಎಂದು ಜೆಸಿಇಆರ್ನ ಪ್ರಾಚಾರ್ಯ ಮತ್ತು ನಿರ್ದೇಶಕರಾದ ಡಾ. ಎಸ್.ವ್ಹಿ. ಗೋರಬಾಳ ಅವರು ತಿಳಿಸಿದರು.
ನಗರದ ಕಾಲೇಜು ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 06 ರಂದು ಬೆಳಗ್ಗೆ 10:00 ಗಂಟೆಗೆ ಈ ಪ್ರತಿಷ್ಠಿತ ಕಾರ್ಯಕ್ರಮವು ಆರಂಭವಾಗಲಿದೆ. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆದ ಡಾ. ಪ್ರಸಾದ್ ರಾಂಪುರೆ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ವಾಹಿನಿಯ ಮುಖ್ಯ ಸಂಪಾದಕರಾದ ಅಜಿತ್ ಹನಮಕ್ಕನವರ್ ಅವರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಈ ಕಾಲೇಜಿನ ಎಲೆಕ್ಟ್ರಾನಿಕ್ಸ್ ್ಘ ಕಮ್ಯುನಿಕೇಶನ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗಗಳು ಈಗಾಗಲೇ ಎನ್ಬಿಎ ಮಾನ್ಯತೆ ಪಡೆದುಕೊಂಡಿವೆ. ಪ್ರಸಕ್ತ ಸಾಲಿನಲ್ಲಿ ವಿವಿಧ ವಿಭಾಗಗಳಲ್ಲಿ ಯಶಸ್ವಿಯಾಗಿ ತೇರ್ಗಡೆ ಹೊಂದಿದ ಒಟ್ಟು 260 ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈ ಸಮಾರಂಭದಲ್ಲಿ ಅಧಿಕೃತವಾಗಿ ಪದವಿ ಪ್ರದಾನ ಮಾಡಲಾಗುವುದು ಎಂದು ಅವರು ವಿವರಿಸಿದರು.
ಶನಿವಾರ ನಡೆಯಲಿರುವ ಈ ಘಟೀಕೋತ್ಸವ ಹಾಗೂ ಪದವಿ ಪ್ರಮಾಣಪತ್ರ ವಿತರಣೆ ಸಮಾರಂಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಪ್ರಾಂಶುಪಾಲರು ಕರೆ ನೀಡಿದರು. ಈ ಸುದ್ದಿಗೋಷ್ಠಿಯಲ್ಲಿ ಡಾ. ಪ್ರಕಾಶ ಸೋನವಾಲಕರ್, ನಿವೃತ್ತ ಕರ್ನಲ್ ಜಾನಿ ಹಾಗೂ ಡಾ. ಜ್ಯೋತಿ ಬಿ.ಆರ್ ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 