ಮತದಾರರ ವಿಶೇಷ ಸಮಗ್ರ ಪರಿಷ್ಕರಣೆಗೆ ಸಹಕರಿಸಿ: ತಹಶೀಲ್ದಾರ
Cooperate in special comprehensive revision of voters: Tahsildar
ಲೋಕದರ್ಶನ ವರದಿ
ಕಾಗವಾಡ 24: ಅರ್ಹ ಮತದಾರರು ಮತದಾನದಿಂದ ವಂಚಿತರಾಗದಂತೆ ಮತದಾರ ಪಟ್ಟಿಯ ಸಮಗ್ರ ಪರಿಷ್ಕರಣೆಗೆ ನೇಮಕಗೊಂಡ ಎಲ್ಲ ಬಿಎಲ್ಓ, ಬಿಎಲ್ಎಗ ಮೇಲ್ವಿಚಾರಕರು ಮತ್ತು ಬಿಎಲ್ಎಗಳು ಎಚ್ಚರ ವಹಿಸಿ, ಕಾರ್ಯ ನಿರ್ವಹಿಸಬೇಕೆಂದು ತಹಶೀಲ್ದಾರ ರವೀಂದ್ರ ಹಾದಿಮನಿ ಹೇಳಿದರು. ಅವರು ಮಂಗಳವಾರ ದಿ. 23 ರಂದು ಪಟ್ಟಣದ ಶ್ರೀ ಆಚಾರ್ಯ 108 ವಿದ್ಯಾಸಾಗರ ಪ್ರೌಢಶಾಲೆಯ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಕಾಗವಾಡ ಹೋಬಳಿಯ ಬಿಎಲ್ಓ ಹಾಗೂ ಬಿಎಲ್ಎ ಮೇಲ್ವಿಚಾರಕರ ತರಬೇತಿ ಮತ್ತು ರಾಜಕೀಯ ಪಕ್ಷದಿಂದ ನೇಮಕಗೊಂಡ ಬಿಎಲ್ಎಗಳಿಗೆ ತರಬೇತಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಭಾರತೀಯ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾ ಆಯೋಗ ಬೆಂಗಳೂರು ಇವರ ಆದೇಶದಂತೆ ಕಾಗವಾಡ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಎಲ್ಲರ ಸಹಭಾಗಿತ್ವ ಅತೀ ಮುಖ್ಯವಾಗಿರುತ್ತದೆ. ಎಲ್ಲ ರಾಜಕೀಯ ಪಕ್ಷದ ಮುಖಂಡರು, ಸಾರ್ವಜನಿಕರು ಮತದಾರರ ಸಮಗ್ರ ಪರಿಷ್ಕರಣೆಯಲ್ಲಿ ಭಾಗಿಯಾಗಿ ಮತದಾನ ಪ್ರಮಾಣ ಹೆಚ್ಚಿಸಿ, ಸದೃಢ ದೇಶದ ಬುನಾದಿಗೆ ಸಹಕರಿಸಬೇಕು ಅದಲ್ಲದೆ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸಿ, ಮಾಹಿತಿ ಕಲೆಹಾಕಿ ಈ ಪರಿಷ್ಕರಣೆ ಕಾರ್ಯದ ಗುರಿ ಸಾಧಿಸಬೇಕೆಂದು ಹೇಳಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 