ಬಿಎಲ್‌ಒಗಳಿಗೆ ಸಹಕಾರ ನೀಡಿ: ಗಣತಿ ನಮೂನೆ ವಿತರಣೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಅಗತ್ಯ
Cooperate with BLOs: Public participation is essential for the distribution of census forms
ಲೋಕದರ್ಶನ ವರದಿ
ವಿಜಯಪುರ 07: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯದಲ್ಲಿ ನಿರತರಾಗಿದ್ದು, ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಅವರಿಗೆ ಅಗತ್ಯ ಸಹಕಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಎಸ್‌ಐಆರ್-2026 ಕುರಿತು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಎಲ್‌ಒಗಳು ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಕೈಗೊಂಡಿದ್ದಾರೆ. ಈ ಕಾರ್ಯವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಸಹಕರಿಸಬೇಕಿದ್ದು, ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಹೇಳಿದರು. ಮತದಾರರ ಪಟ್ಟಿಯಲ್ಲಿರುವವರು ಮೃತಪಟ್ಟಿದ್ದರೆ, ಸ್ಥಳಾಂತರಗೊಂಡಿದ್ದರೆ ಅಥವಾ ಬೇರೆ ಕಾರಣಗಳಿಂದ ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಅಗತ್ಯವಿದ್ದರೆ, ಸಂಬಂಧಿಸಿದ ಬಿಎಲ್‌ಒಗಳಿಗೆ ಮಾಹಿತಿ ನೀಡಬೇಕು.
ಮೃತಪಟ್ಟಿರುವ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಮರಣ ಪ್ರಮಾಣಪತ್ರ ಅಥವಾ ಅದು ಲಭ್ಯವಿಲ್ಲದಿದ್ದಲ್ಲಿ ಕುಟುಂಬದ ಸದಸ್ಯರ ಲಿಖಿತ ಮಾಹಿತಿಯನ್ನು ಸಲ್ಲಿಸಬೇಕು ಎಂದು ಸೂಚಿಸಿದರು. ಗಣತಿ ನಮೂನೆಗಳಲ್ಲಿ ಮಾಹಿತಿ ಅಪೂರ್ಣವಾಗಿದ್ದರೆ ಅಥವಾ ತಪ್ಪು ಮಾಹಿತಿ ದಾಖಲಾಗಿದ್ದರೆ, ಮುಂದಿನ ಹಂತದಲ್ಲಿ ಸಂಬಂಧಿತ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು (ಎಆರ್‌ಒಗಳು) ಪರೀಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 