ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಗೆ ಸಹಕರಿಸಿ : ಜಿಲ್ಲಾಧಿಕಾರಿ
Cooperate with social and educational survey: District Collector
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ ಎಂದುಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.ಈ ಸಮೀಕ್ಷೆಯು ಸೆಪ್ಟೆಂಬರ್ 22 ರಿಂದ ಅಕ್ಟೊಬರ್ 7 ರವರೆಗೆ ನಡೆಯಲಿದ್ದು, ಸಮೀಕ್ಷೆ ಸಂದರ್ಭದಲ್ಲಿ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಸದ್ರಿ ಸಮೀಕ್ಷೆಗೆ ದಾಖಲೆ, ಮಾಹಿತಿಯ ಅವಶ್ಯಕತೆ ಇರುತ್ತದೆ.ಜನರು ಭಯ ಇಲ್ಲದೆ ತಮ್ಮ ಮಾಹಿತಿಯನ್ನು ಗಣತಿಗೆ ಬರುವ ಶಿಕ್ಷಕ ವರ್ಗದವರಿಗೆ ನೀಡಬೇಕು. ಇದರಿಂದ ಸರ್ಕಾರದ ಯೋಜನೆ ರೂಪಿಸಲು ಮತ್ತು ತಲುಪಿಸಲು ಅನುಕೂಲವಾಗಲಿದೆ.ಆದ್ದರಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ ಕುಟುಂಬದ ಸದಸ್ಯರ ಅವಶ್ಯಕ ದಾಖಲೆ,ಮಾಹಿತಿಯನ್ನು ಗಣತಿದಾರರಿಗೆ ಒದಗಿಸಿ ಸಮೀಕ್ಷೆಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ......
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 