ಅಭಿವೃದ್ಧಿ ಕೆಲಸಕ್ಕೆ ರಾಜಕೀಯ ಬೆರೆಸದೆ ಸಹಕಾರ ನೀಡಬೇಕು: ಶಾಸಕ ಪಠಾಣ
Cooperation should be extended to development work without mixing politics: MLA Pathan
ಶಿಗಾಂವಿ, ಸೆ. 3: ಅಭಿವೃದ್ಧಿ ಕಾಮಗಾರಿಗಳು ನಡೆಯುವ ಸಂದರ್ಭದಲ್ಲಿ ಸ್ಥಳೀಯರು ಪರ-ವಿರೋಧದ ರಾಜಕೀಯ ಮಾಡದೆ, ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಶಾಸಕ ಯಾಸಿರ್ಖಾನ್ ಪಠಾಣ ಹೇಳಿದರು.
ತಾಲೂಕಿನ ಹಿರೇಮಲ್ಲೂರು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆ. ಜನರ ಆಶೀರ್ವಾದದಿಂದ ದೊರೆತ ಸ್ಥಾನಮಾನವನ್ನು ಕ್ಷೇತ್ರದ ಅಭಿವೃದ್ಧಿಗೆ ಬಳಸಿಕೊಳ್ಳುವುದು ತಮ್ಮ ಉದ್ದೇಶವಾಗಿದೆ ಎಂದರು.
ಹಿರೇಮಲ್ಲೂರು ಗ್ರಾಮದಲ್ಲಿ ?2 ಕೋಟಿ ವೆಚ್ಚದಲ್ಲಿ ಹಳ್ಳಕ್ಕೆ ಚೆಕ್ಡ್ಯಾಂ ನಿರ್ಮಾಣ, ?10 ಲಕ್ಷ ಅನುದಾನದಲ್ಲಿ ಹೈಮಾಸ್ಟ್ ದೀಪಗಳ ಅಳವಡಿಕೆ, ವಿವಿಧ ಕಾಲೊನಿಗಳಲ್ಲಿ ?40 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಗಟಾರ್ ನಿರ್ಮಾಣ, ಈಶ್ವರ ದೇವಸ್ಥಾನ ಅಭಿವೃದ್ಧಿಗೆ ?5 ಲಕ್ಷ, ಮೈಲಾರಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ?10 ಲಕ್ಷ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ನಿರ್ಮಾಣಕ್ಕೆ ?20 ಲಕ್ಷ ಸೇರಿದಂತೆ ಒಟ್ಟು ?2.85 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಸಹಜವಾಗಿದ್ದು, ಅಭಿವೃದ್ಧಿ ವಿಷಯದಲ್ಲಿ ಎದುರಾಗುವ ಸಮಸ್ಯೆಗಳನ್ನು ಸ್ಥಳೀಯರೊಂದಿಗೆ ಚರ್ಚಿಸಿ ಪರಿಹರಿಸಿಕೊಳ್ಳಬೇಕು. ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ನಡೆದಾಗ ಮಾತ್ರ ಅವು ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯ ಎಂದು ಶಾಸಕ ಪಠಾಣ ಹೇಳಿದರು.
ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಮಾತನಾಡಿ, ತಾಲೂಕಿನ ಅಭಿವೃದ್ಧಿಗೆ ಶಾಸಕರೊಂದಿಗೆ ಕೈಜೋಡಿಸಿ ಕೆಲಸ ಮಾಡುವುದಾಗಿ ತಿಳಿಸಿದರು. ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರೂ ನಿರಂತರ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಸವರಾಜ ಶಿವಣ್ಣವರ, ಸಿದ್ದನಗೌಡ ಹುಟ್ಟನಗೌಡ್ರ, ಬಸನಗೌಡ ಲಿಂಗನಗೌಡ್ರ, ವೀರಗೌಡ ಗೋಣಿಗೌಡ್ರ, ಶಿವಾನಂದ ಗಂಜಿಗಟ್ಟಿ, ಸಲಿಂ ಎಳವಟ್ಟಿ, ಮಾಬುಸಾಬ ನದಾಫ್, ಇಸೂಫಸಾಬ ದೊಡ್ಡನಿ, ಹಜರೇಸಾಬ ನದಾಫ್, ಹುಸೇನಬಿ ನದಾಫ್ ಹಾಗೂ ನಜೀರ್ಸಾಬ ಗೋಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 