ಯಲಗೋಡದಲ್ಲಿ ನಾಳೆ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಯಲಗೋಡದಲ್ಲಿ ನಾಳೆ ಸಹಕಾರ ಸಂಘದ ವಾರ್ಷಿಕ ಮಹಾಸಭೆ  Cooperative society's annual general meeting in Yalagoda tomorrow


ದೇವರಹಿಪ್ಪರಗಿ 22: ತಾಲೂಕಿನ ಯಲಗೋಡ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಸೆ. 24ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಸಂಘದ ಸಭಾಭವನದಲ್ಲಿ ನಡೆಯಲಿದೆ.  

ಸಂಘದ ಅಧ್ಯಕ್ಷ ಸಾಯಿಬಣ್ಣ ಬಾಗೇವಾಡಿ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದ್ದು, ವಾರ್ಷಿಕ ವರದಿ, ಲೆಕ್ಕಪತ್ರಗಳು ಹಾಗೂ ಸಂಘದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.  

ಸಂಘದ ಪ್ರಗತಿ, ಸದಸ್ಯರ ಹಿತಾಸಕ್ತಿ ಹಾಗೂ ಭವಿಷ್ಯದ ಕಾರ್ಯಯೋಜನೆಗಳ ಕುರಿತು ಮಹತ್ವದ ಚರ್ಚೆಗಳು ನಡೆಯಲಿರುವುದರಿಂದ ಸರ್ವ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಸಂಘದ ಪ್ರಕಟಣೆ ತಿಳಿಸಿದೆ.