ಸಿಬ್ಬಂದಿಗಳೊಂದಿಗೆ ಸಮನ್ವಯ ಸಾಧಿಸಿ ಗ್ರಾಮಾಭಿವೃದ್ಧಿಗೆ ಒತ್ತು

ಸಿಬ್ಬಂದಿಗಳೊಂದಿಗೆ ಸಮನ್ವಯ ಸಾಧಿಸಿ ಗ್ರಾಮಾಭಿವೃದ್ಧಿಗೆ ಒತ್ತು  Coordinate with staff and focus on rural development

ಲೋಕದರ್ಶನ ವರದಿ  

ಮುಂಡಗೋಡ 14:   ಮಳಗಿ ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ  ಶ್ರೀ ಕೃಷ್ಣಾ ಕುಳ್ಳೂರ ಅವರ ಕರ್ತವ್ಯನಿಷ್ಠ ಕಾರ್ಯವೈಖರಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.  ತೋಟಗಾರಿಕೆ ತಾಲೂಕಾ ಅಧಿಕಾರಿಯಾಗಿ   ಜವಾಬ್ದಾರಿ ಹೊಂದಿದ್ದರೂ ಸಹ, ವಾರದಲ್ಲಿ ಮಂಗಳವಾರ, ಗುರುವಾರ ಹಾಗೂ ಶನಿವಾರ ದಿನಗಳಲ್ಲಿ ಮಳಗಿ ಗ್ರಾಮ ಪಂಚಾಯಿತಿಯಲ್ಲಿ ಹಾಜರಿದ್ದು ಅಭಿವೃದ್ಧಿ ಕಾಮಗಾರಿಗಳ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುವ ಪ್ರತಿಯೊಂದು ಕಾಮಗಾರಿಯನ್ನು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರೀಶೀಲಿಸಿ, ಕಾಮಗಾರಿ ಸಮರ​‍್ಕವಾಗಿರುವುದನ್ನು ಖಚಿತಪಡಿಸಿಕೊಂಡ ನಂತರವೇ ಚೆಕ್ಗಳಿಗೆ ಸಹಿ ಮಾಡುವ ವ್ಯವಸ್ಥೆಯನ್ನು ಅನುಸರಿಸುತ್ತಿದ್ದಾರೆ.

ಬೇಸಿಗೆ ಸಮಯದಲ್ಲಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಹಾಗೂ ಜಾನುವಾರಿಗಳಿಗೆ ನೀರಿನ ಕೊರತೆ ಉಂಟಾಗದಂತೆ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿರುವ ಅವರು, ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ. ಪ್ರತಿ ವಾರ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಗ್ರಾಮ ಅಭಿವೃದ್ಧಿ, ಸ್ವಚ್ಛತೆ, ನೀರು ಸರಬರಾಜು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಿ ಅಗತ್ಯ ಮಾರ್ಗದರ್ಶನ ನೀಡುತ್ತಿದ್ದಾರೆ. ತೋಟಗಾರಿಕೆ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಇದ್ದರೂ ಸಹ ಆಡಳಿತಾಧಿಕಾರಿಯಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಕೃಷ್ಣಾ ಕುಳ್ಳೂರ ಅವರ ಸೇವೆಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.