ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯ

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯ Coordination of all departments is necessary to eliminate child labor

ಲೋಕದರ್ಶನ ವರದಿ 

ಬೆಳಗಾವಿ  12: ಬಾಲಕಾರ್ಮಿಕ ಪದ್ಧತಿ ಕಾಯ್ದೆಯು ಜಾರಿಗೆ ಬಂದು ಸುಮಾರು ನಲವತ್ತು ವರ್ಷಗಳಾಗಳಾದರು ಸಹ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತವಾಗಿದ್ದು, ಇಂತಹ ಅನಿಷ್ಠ ಪದ್ಧತಿಯ ನಿರ್ಮೂಲನೆಗೆ ಸಂಬಂಧಪಟ್ಟ ಎಲ್ಲ ಇಲಾಖೆಗಳ ಸಮನ್ವಯದ ಅಗತ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಎನ್‌. ಶಿವಕುಮಾರ ತಿಳಿಸಿದರು. ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಜೂನ್ 12 (ಶುಕ್ರವಾರ) ಆಯೋಜಿಸಲಾಗಿದ್ದ 'ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ-2026' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಾಲಕಾರ್ಮಿಕ ಪದ್ಧತಿಯಲ್ಲಿ ಸಿಲುಕುವ ಬಹುತೇಕರು ಬಡ ಕುಟುಂಬಗಳ ಮಕ್ಕಳಾಗಿದ್ದು ಅಧಿಕಾರಿಗಳು ಕೇವಲ ಪ್ರಕರಣ ದಾಖಲಿಸದೇ, ಅಂತಹ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಕಾರ್ಯಕ್ಕೆ ಮುಂದಾಗಬೇಕು. ಯಾವುದೇ ಒಂದು ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ವಿವಿಧ ಇಲಾಖೆಗಳ ಸಹಕಾರ ಅತ್ಯಗತ್ಯ ಎಂದರು.