ಕೋಪ್ಟಾ ದಾಳಿ : 22 ಪ್ರಕರಣ, 25 ಸಾವಿರ ದಂಡ ವಸೂಲಿ
ಬಾಗಲಕೋಟೆ: ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ, ನಿಯಮ ಉಲ್ಲಂಘಣೆ ಆರೋಪದಡಿ ದಂಡ ವಿಧಿಸಿ ಪ್ರಕರಣ ದಾಖಲಿಸಲಾಗಿದೆ.
ಬೀಳಗಿ ನಗರದಲ್ಲಿ ಬುಧವಾರ ತಂಬಾಕು ಉತ್ಪನ್ನಗಳ ಸಗಟು ಹಾಗೂ ಚಿಲ್ಲರೆ ಮಾರಾಟಗಾರರ ಅಂಗಡಿಗಳ ಮೇಲೆ ದಾಳಿ ನಡೆಸಲಾಯಿತು. ದಾಳಿಯಲ್ಲಿ ನಿಯಮ ಉಲ್ಲಂಘನೆ ಕಂಡು ಬಂದ ಹಿನ್ನಲೆಯಲ್ಲಿ ಕೋಪ್ಟಾ ಕಾಯ್ದೆ-2003ರ ಸೆಕ್ಷನ್ 4 ಮತ್ತು 6ರಡಿ ಒಟ್ಟು 22 ಪ್ರಕರಣಗಳನ್ನು ದಾಖಲಿಸುವದರ ಜೊತೆಗೆ ಒಟ್ಟು 25 ಸಾವಿರ ರೂ.ಗಳ ದಂಡ ವಿಧಿಸಲಾಗಿದೆ.
ತಂಬಾಕು ಉತ್ಪನ್ನ ಮಾರಾಟಗಾರರಿಗೆ ತಮ್ಮ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಫಲಕಗಳನ್ನು ಹಾಕಬೇಕು. ಸೀಗರೇಟ್, ಬೀಡಿಗಳನ್ನು ಬಿಡಿ ಬಿಡಿಯಾಗಿ ಮಾರಾಟ ಮಾಡದಂತೆ ಸೂಚಿಸಲಾಯಿತು. ತಂಬಾಕು ಉತ್ಪನ್ನಗಳ ಬಗ್ಗೆ ಗೋಡೆ ಬರಹ, ಹೋಡರ್ಿಂಗ್ಸ್, ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಮೂಲಕ ತಂಬಾಕು ಉತ್ಪನ್ನಗಳ ಜಾಹೀರಾತು ಮಾಡಬಾರದೆಂದು ಕರಪತ್ರ ನೀಡುವ ಮೂಲಕ ತಿಳಿಸಲಾಯಿತು. ಸೆಕ್ಷನ್ 6 (ಬಿ) ಕಾಯ್ದೆ ಅನುಸಾರ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಉಲ್ಲಂಘಣೆಯಾದಲ್ಲಿ ದಂಡ ಹಾಗೂ ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದರು.
ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದಿಂದ ಜಿಲ್ಲಾ ತಂಬಾಕು ಸಲಹೆಗಾರರಾದ ಶಶಿಕಾಂತ ಕುಮಠಳ್ಳಿ, ಸಮಾಜ ಕಾರ್ಯಕರ್ತರಾದ ಶಿವಲಿಂಗ ಕರಗಣ್ಣಿ, ಬೀಳಗಿ ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ.ಡಿ.ಎಸ್.ಕರೆಣ್ಣವರ ಹಾಗೂ ತಾಲೂಕಾ ಆರೋಗ್ಯ ಮೇಲ್ವಿಚಾರಕರಾದ ಎಸ್.ಕೆ. ಜಾದವ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 