ಕರೋನ: ದೇಶದಲ್ಲಿ ಈವರೆಗೆ 934 ಜನರ ಸಾವು, 6868 ರೋಗಿಗಳು ಗುಣಮುಖ
ನವದೆಹಲಿ ಏ 28, ದೇಶದ್ಯಾಂತ ಕರೊನ ಸೋಂಕಿಗೆ ಇದುವರೆಗೆ ಬಲಿಯಾದವ ಸಂಖ್ಯೆ ಸಂಖ್ಯೆ 934ಕ್ಕೆಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಿಗ್ಗೆ ಮಾಹಿತಿ ಬಿಡುಗಡೆ ಮಾಡಿದೆ. ಲಾಕ್ ಡೌನ್ ನಂತಹ . ಕಠಿಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಸೋಂಕು ನಿಯಂತ್ರಣ ಸವಾಲಾಗಿ ಪರಿಣಮಿಸಿದೆ. ಈ ನಡುವೆ ಕಳೆದ 24 ಗಂಟೆಗಳ ಅವಧಿಯಲ್ಲಿ 62 ಜನರು ಕೊರೊನಾಗೆ ಬಲಿಯಾಗಿದ್ದು ದೇಶದಲ್ಲಿ ಮಹಾಮಾರಿ ಕೊರೊನಾಗೆ ತುತ್ತಾಗಿ ಮೃತಪಟ್ಟವರ ಸಂಖ್ಯೆ 934ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1543 ಮಂದಿಯಲ್ಲಿ ಮಾರಕ ಸೋಂಕು ದೃಡಪಟ್ಟಿದೆ. ದೇಶದಲ್ಲಿ ಒಟ್ಟಾರೆ ಸೋಂಕು ಪೀಡಿತರ ಸಂಖ್ಯೆ 29,435ಕ್ಕೆ ಏರಿಕೆಯಾಗಿದೆ. ಈ ಪೈಕಿ 21,632 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 6868 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡಗುಗಡೆಯಾಗಿದ್ದಾರೆ.
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 