ಬೆಂಗಳೂರು, ಜೂ.26,ಮಹಾಮಾರಿ ಕೊರೊನಾಗೆ ಹೆದರಿ ಸೋಂಕಿತ ವೃದ್ಧೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.60 ವರ್ಷದ ವೃದ್ಧೆ ಶುಕ್ರವಾರ ನೇಣಿಗೆ ಶರಣಾಗಿದ್ದಾರೆ.ಇಂದು ಬೆಳಿಗ್ಗಿನ ಜಾವ 2:30 ಸುಮಾರಿಗೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕುಣಿಗಲ್ ಮೂಲದ ಮೃತ ಮಹಿಳೆ ರಾಜಗೋಪಾಲನಗರದಲ್ಲಿ ವಾಸವಾಗಿದ್ದರು. ಜೂ. 18ರಂದು ವೃದ್ಧೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಮಗ, ಸೊಸೆ ಮತ್ತು ಮೊಮ್ಮಗನಲ್ಲಿಯೂ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರು ಸಹ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.