ವಿಜಯಪುರ 13: ಕೊರೊನಾ ಸೋಂಕಿತರು ನಗರದಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕಪಡದೆ ಸಾಮಾಜಿಕ ಅಂತರ ಮತ್ತು ಅವಶ್ಯಕ ಮುನ್ನೆಚ್ಚರಿಕೆ ವಹಿಸಬೇಕು. ಜಿಲ್ಲಾಡಳಿತ ಸಹ ಮುನ್ನೆಚ್ಚರಿಕೆಯಾಗಿ ಕೈಗೊಳ್ಳುವ ಕಾರ್ಯಗಳಿಗೆ ಮುಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಾಯರ್ಾಲಯದ ವಿಡಿಯೋ ಸಂವಾದ ಸಭಾಂಗಣದಲ್ಲಿಂದು ತಾಲೂಕಾ ಮಟ್ಟದ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು ಈವರೆಗೆ ಜಿಲ್ಲಾಡಳಿತ ಕೊರೋನಾ ನಿಯಂತ್ರಣಕ್ಕೆ ಹಲವು ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಶಾಸಕರಿಂದ ತಿಳಿದು ಬಂದಿದ್ದು, ಮುಂದಿನ ದಿನಗಳಲ್ಲಿಯೂ ಕೂಡ ಮಹಾಮಾರಿ ಕೊರೋನಾ ಕಟ್ಟಿಹಾಕಲು ಮುಕ್ತ ರೀತಿಯಲ್ಲಿ ಕಾರ್ಯನಿರ್ವಹಿಸಲು ಜಿಲ್ಲಾಡಳಿತಕ್ಕೆ ಸಲಹೆ ನೀಡಿದ ಅವರು ಸಕರ್ಾರವು ಕೂಡ ತಮಗೆ ಬೆಂಬಲವಾಗಿ ನಿಲ್ಲಲಿದೆ ಎಂದು ಅವರು ಧೈರ್ಯ ತುಂಬಿದರು.
ಶಾಸಕರಾದ ಯಶವಂತರಾಯಗೌಡ ಪಾಟೀಲ, ಅರುಣ ಶಹಾಪೂರ, ಸುನೀಲ್ಗೌಡ ಪಾಟೀಲ, ಮಾಜಿ ಸಚಿವ ಎಂ.ಸಿ ಮನಗೂಳಿ ಅವರು ಜಿಲ್ಲಾಡಳಿತ ಈವರೆಗೆ ಕೈಗೊಂಡ ಕ್ರಮಗಳು ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿವೆ. ನಿನ್ನೆಯ ಅನಿರೀಕ್ಷಿತ ಬೆಳವಣಿಗೆ ಮತ್ತು ದಿಢೀರ್ ಆಗಿ ನಗರದಲ್ಲಿ ಕೊರೋನಾ ಸೋಂಕಿತರ ದೃಢಪಟ್ಟಿದ್ದರಿಂದ ಸಾರ್ವಜನಿಕರು ಮತ್ತು ಜಿಲ್ಲಾಡಳಿತದ ಅಧಿಕಾರಿ ಮತ್ತು ಸಿಬ್ಬಂದಿಗಳಲ್ಲಿ ಆತಂಕ ಮೂಡಿದೆ. ಕಾರಣ ಸದ್ಯಕ್ಕೆ ಕೊರೋನಾ ಸಂಬಂಧಿತ ಹಾಗೂ ಆರೋಗ್ಯ ಸಂಬಂಧಿತ ವಿಷಯಗಳಿಗೆ ಹೆಚ್ಚು ಗಮನ ನೀಡುವ ಅನಿವಾರ್ಯತೆಯಿದೆ ಎಂಬ ಅಭಿಪ್ರಾಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಕೂಡಾ ಜಿಲ್ಲಾಡಳಿತ ಮತ್ತು ಜನತೆ ಆತ್ಮಸ್ಥೈರ್ಯ ಕಳೆದುಕೊಳ್ಳದಂತೆ ಮನವಿ ಮಾಡಿ ಅವಶ್ಯಕ ಎಲ್ಲ ನೆರವನ್ನು ಮುಂದಿನ ದಿನಗಳಲ್ಲಿ ಸಕರ್ಾರದಿಂದ ದೊರಕಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಜಿಲ್ಲೆಯಾದ್ಯಂತ ಕೊರೊನಾ ಸೋಂಕಿತರ ಬಗ್ಗೆ ತೀವ್ರ ನಿಗಾ ಇಡುವ ಅವಶ್ಯಕತೆಯಿದೆ. ಅದರಂತೆ ಅವರಿಗೆ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಗಳ ಬಗ್ಗೆಯೂ ತೀವ್ರ ತನಿಖೆ ನಡೆಸುವಂತೆ ತಿಳಿಸಿದ ಅವರು ಜಿಲ್ಲೆಯಾದ್ಯಂತ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಯಾವದೇ ಕಾರಣದಿಂದ ಸಾವನ್ನಪ್ಪಿದ ವ್ಯಕ್ತಿಗಳ ಬಗ್ಗೆಯೂ ಆಯಾ ತಾಲೂಕಾಡಳಿತ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಿಡಿಓಗಳ ಗಮನಕ್ಕೆ ತರಬೇಕು. ನಿನ್ನೆಯಿಂದ ಜಿಲ್ಲೆಯಾದ್ಯಂತ ಸಾರ್ವಜನಿಕರಲ್ಲಿ ಹೆಚ್ಚು ಆತಂಕ ಮತ್ತು ಜಿಲ್ಲಾಡಳಿತದ ಮೇಲೆ ಹೆಚ್ಚಿನ ಒತ್ತಡ ಇರುವ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಅವಶ್ಯಕ ಎಲ್ಲ ಸಹಕಾರವನ್ನು ಜನಪ್ರತಿನಿಧಿಗಳಿಂದ ದೊರೆಯಲಿ ಎಂದು ಅವರು ತಿಳಿಸಿದರು.
ಸಕರ್ಾರ ಜಿಲ್ಲೆಯ ಜನರೊಂದಿಗಿದ್ದು ಆತಂಕ ಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿ, ಕೊರೋನಾ ನಿಯಂತ್ರಣ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ನಡೆಯಲು ನಿರಂತರ ಶ್ರಮಿಸೋಣ ಎಂದ ಅವರು ಜಿಲ್ಲೆಯ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಸೂಕ್ತ ಬೆಲೆ ದೊರೆತು ರೈತರಿಗೆ ನೆರವಾಗಲು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳನ್ನು ಆರಂಭಿಸುವ ಕುರಿತು ಮತ್ತು ಜಿಲ್ಲೆಯಿಂದ ವಿಶೇಷವಾಗಿ ಸಿಂದಗಿ ಮತ್ತು ಇತರೆ ಕಡೆಗಳಿಂದ ಗುಳೆ ಹೋಗಿರುವಂತಹ ಕುಟುಂಬಗಳಿಗೆ ಆಹಾರ, ಇತರೆ ಅಗತ್ಯ ವಸ್ತುಗಳು ಇನ್ನಿತರ ಸಮಸ್ಯೆಗಳ ಪರಿಹಾರದ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರುವುದರ ಜೊತೆಗೆ ಮಹಾರಾಷ್ಟ್ರ ಸಕರ್ಾರದೊಂದಿಗೂ ಚಚರ್ಿಸಿ ಸಾಧ್ಯವಿದ್ದಷ್ಟು ಅವರಿಗೆ ಸೌಲಭ್ಯ ಕಲ್ಪಿಸಲು ಹಾಗೂ ರಕ್ಷಣೆ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ವಿರೋಧ ಪಕ್ಷದ ನಾಯಕರಾದ ಎಸ್.ಆರ್ ಪಾಟೀಲ ಅವರು ಕೋವಿಡ್-19 ನಿಯಂತ್ರಣಕ್ಕೆ ಕೋವಿಡ್ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳ ಸಹಕಾರ, ವೆಂಟಿಲೇಟರ್ಗಳ ವ್ಯವಸ್ಥೆ, ಕೊರೊನಾ ಸೋಂಕಿತರ ಪ್ರದೇಶದಲ್ಲಿ ಅಗತ್ಯ ವಸ್ತುಗಳ ಪೂರೈಕೆ ಮಾಡಲು ಕ್ರಮಕೈಗೊಳ್ಳಬೇಕು. ಜನರಿಗೆ, ಕಾಮರ್ಿಕರಿಗೆ, ನಿರ್ಗತಿಕರಿಗೆ ಊಟ, ದಿನಸಿ ವಸ್ತುಗಳ ವ್ಯವಸ್ಥೆ ಮಾಡಬೇಕು. ಜಿಲ್ಲಾಡಳಿತದೊಂದಿಗೆ ಬೆಂಬಲವಾಗಿ ನಿಲ್ಲುವುದಾಗಿ ತಿಳಿಸಿದರು.
ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಜಿಲ್ಲಾಡಳಿತ ಶಕ್ತಿಮೀರಿ ಕೊರೊನಾ ನಿಯಂತ್ರಣಕ್ಕೆ ಶ್ರಮಿಸಿದೆ. ಕೊರೊನಾ ಜೊತೆಗೆ ಕುಡಿಯುವ ನೀರಿಗೂ ಆದ್ಯತೆ ನೀಡಬೇಕು. ವಿವಿಧ ಕಾಲುವೆಗಳಿಗೆ ನೀರು ಹರಿಸಬೇಕು, ಭೀಮಾನದಿಗೆ ಉಜನಿ ಜಲಾಶಯದಿಂದ ನೀರು ಬಿಡುವ ಕುರಿತು ಸಕರ್ಾರದ ಮಟ್ಟದಲ್ಲಿ ಪ್ರಯತ್ನಿಸಲು ಮನವಿ ಮಾಡಿದರು.
ಮಾಜಿ ಸಚಿವ ಶಾಸಕ ಎಂ.ಸಿ ಮನಗೂಳಿ ಅವರು ಸಿಂದಗಿ ಭಾಗದಿಂದ ಮಹಾರಾಷ್ಟ್ರ ಮತ್ತು ಗೋವಾಗಳಿಗೆ ಹಲವು ಜನರು ಗುಳೆ ಹೋಗಿದ್ದು, ಅವರಿಗೆ ಊಟ, ವಸತಿ, ನೀರಿನ ಸೌಲಭ್ಯ ಒದಗಿಸುವಂತೆ ಮನವಿ ಮಾಡಿದರು.
ಶಾಸಕ ಎ.ಎಸ್ ಪಾಟೀಲ (ನಡಹಳ್ಳಿ) ಅವರು ತಾಲೂಕಿನ 100 ವೈದ್ಯರು ಸ್ವಯಂ ಪ್ರೇರಣೆಯಿಂದ ಕೋವಿಡ್-19 ಚಿಕಿತ್ಸೆಗೆ ಮುಂದೆ ಬಂದಿದ್ದು, ಅವರಿಗೆ ಸುರಕ್ಷತಾ ಸಲಕರಣೆ ಪೂರೈಸಲು, ಶಾಸಕ ದೇವಾನಂದ ಚವ್ಹಾಣ ಅವರು ಮಹಾರಾಷ್ಟ್ರ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲು, ಶಾಸಕ ಅರುಣ ಶಹಾಪೂರ ಅವರು ಕೋವಿಡ್-19 ಸೋಂಕಿತರ ಶವ ಸಂಸ್ಕಾರ ಮಾರ್ಗಸೂಚಿ ತಿಳಿಹೇಳಬೇಕು ಮತ್ತು ಕೊರೋನಾ ಲಕ್ಷಣಗಳ ಬಗ್ಗೆ ಮಾಹಿತಿ ನೀಡದೇ ಇರುವವರ ಬಗ್ಗೆ ತೀವ್ರ ನಿಗಾ ಇಡಬೇಕು, ಆರೋಗ್ಯ ಸಹಾಯಕರಿಗೆ ನೆರವಾಗುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವಿಧಾನ ಪರಿಷತ್ ಸದಸ್ಯ ಸುನೀಲ್ಗೌಡ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಇತರರು ಉಪಸ್ಥಿತರಿದ್ದರು.