ಕೊರೋನಾ ಪರಿಣಾಮ: ರಾಜ್ಯದ 383 ವಿಚಾರಣಾಧೀನ ಕೈದಿಗಳ ಬಿಡುಗಡೆಗೆ ತೀರ್ಮಾನ
ಬೆಂಗಳೂರು, ಏ.2, ಕೋವಿಡ್ 19 ವೈರಸ್ ಹರಡುವ ಆತಂಕದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ 180 ಖೈದಿಗಳೂ ಸೇರಿ ರಾಜ್ಯದ ವಿವಿಧ ಜೈಲುಗಳಲ್ಲಿನ 383 ವಿಚಾರಣಾಧೀನ ಕೈದಿಗಳಿಗೆ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದೆ.ಪರಪ್ಪನ ಅಗ್ರಹಾರ ಸೇರಿ ವಿವಿಧ ಕಾರಾಗೃಹಗಳಲ್ಲಿನ 383 ಕೈದಿಗಳನ್ನು 2 ಹಂತಗಳಲ್ಲಿ ಬಿಡುಗಡೆ ಮಾಡಲಿದ್ದು, ಮೊದಲ ಹಂತದಲ್ಲಿ 7 ವರ್ಷದೊಳಗಿನ ಶಿಕ್ಷೆ ಇರುವ ಪ್ರಕರಣಗಳಲ್ಲಿ ಆರೋಪಿಗಳಾಗಿ ಜೈಲಿಗೆ ಬಂದು ಇನ್ನೂ ವಿಚಾರಣೆ ಎದುರಿಸುತ್ತಿರವವರನ್ನು ಬಿಡುಗಡೆ ಮಾಡಲಾಗುತ್ತದೆ.
ಕೊರೊನಾ ವೈರಸ್ ಖೈದಿಗಳಿಗೆ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಳೆದ ಮಾ.23 ರಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರಗಳ ಕಾರ್ಯನಿರ್ವಾಹಕ ನಿರ್ದೇಶಕರೂ ಆಗಿರುವ ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವ ಉನ್ನತಾಧಿಕಾರ ಸಮಿತಿಯು ಮಧ್ಯಂತರ ಜಾಮೀನು ನೀಡುವ ಕುರಿತು ಮಾರ್ಗಸೂಚಿ ರಚಿಸಿತ್ತು. ಅದರನ್ವಯ ಕಾರಾಗೃಹಗಳಲ್ಲಿನ ವಿಚಾರಣಾಧೀನ ಖೈದಿಗಳಿಗೆ ಜಾಮೀನು ನೀಡುವ ಪ್ರಕ್ರಿಯೆ ಚಾಲನೆ ನೀಡಲಾಗಿದ್ದು, ಬುಧವಾರ 323 ಮಂದಿಗೆ ಜಾಮೀನು ನೀಡಲಾಗಿದೆ ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜು ತಿಳಿಸಿದ್ದಾರೆ.
ಕಳ್ಳತನ, ಸುಲಿಗೆ, ಸರಗಳ್ಳತನ, ವಂಚನೆಯಂತಹ ಪ್ರಕರಣಗಳಲ್ಲಿ ಪರಪ್ಪನ ಅಗ್ರಹಾರದ ಜೈಲಿನ 180 ಮಂದಿ ವಿಚಾರಣಾಧೀನ ಬಂಧಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ರಾಜ್ಯದ ವಿವಿಧ ಕಾರಾಗೃಹಗಳ 200 ಮಂದಿಯ ಪಟ್ಟಿ ಸಿದ್ಧವಾಗಿದೆ ಎಂದು ಕಾರಾಗೃಹದ ಮೂಲಗಳು ತಿಳಿಸಿವೆ. ಮೊದಲ ಹಂತದಲ್ಲಿ 213 ಪಟ್ಟಿ ಸಿದ್ಧಪಡಿಸಲಾಗಿದ್ದು, 2ನೇ ಹಂತದಲ್ಲಿ ಸಜಾ ಬಂಧಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ಮೊದಲು ವಿಚಾರಣಾಧೀನ ಬಂಧಿಗಳನ್ನು ಬಿಡುಗಡೆಗೊಳಿಸಿದ ನಂತರ ಸಜಾ ಬಂಧಿಗಳ ಬಿಡುಗಡೆಗೆ ಕ್ರಮಕೈಗೊಳ್ಳಲಾಗುವುದು. ವಿಚಾರಣಾಧೀನ ಬಂಧಿಗಳಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿದರೆ, ಸಜಾ ಬಂಧಿಗಳನ್ನು ಪರೋಲ್ ಮೇಲೆ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 