ಜಿಲ್ಲೆಯಲ್ಲಿ 63 ಪಾಸಿಟಿವ್ ಪ್ರಕರಣಗಳು ದೃಢ : ಓರ್ವ ರೋಗಿ ಗುಣಮುಖ

ವಿಜಯಪುರ ಮೇ. 22: ಜಿಲ್ಲೆಯಲ್ಲಿ ಇಂದು ದಿನಾಂಕ 22-05-2020 ರಂದು ಇಬ್ಬರು ಜನರಿಗೆ ಕೋವಿಡ್-19 ಸೊಂಕು ತಗುಲಿದ್ದು ದೃಡಪಟ್ಟಿದೆ. ರೋಗಿ ಸಂಖ್ಯೆ 1660 (34 ವರ್ಷದ ಪುರುಷ) ಹಾಗೂ ರೋಗಿ ಸಂಖ್ಯೆ 1661 (33 ವರ್ಷ ಪುರುಷ) ಈ ಇಬ್ಬರೂ ವ್ಯಕ್ತಿಗಳು ನಗರದ ಕಂಟೇನ್ಮೆಂಟ ವಲಯ ವ್ಯಾಪ್ತಿಯವರಾಗಿದ್ದಾರೆ. ಇವರಿಗೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಪರಿಣಾಮಕಾರಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.

ಅದರಂತೆ ಇಂದು ಕೋವಿಡ್-19 ಸೋಂಕಿನಿಂದ ರೋಗಿಸಂಖ್ಯೆ693 (35 ವರ್ಷ ಮಹಿಳೆ) ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಗುಣಮುಖರಾದವರ ಸಂಖ್ಯೆ 42 ಕ್ಕೆ ಏರಿದೆ ಎಂದು ತಿಳಿಸಿದರು. 

ಜಿಲ್ಲೆಯಲ್ಲಿ ಈವರೆಗೆ ಒಟ್ಟು 63 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇದರಲ್ಲಿ 42 ಜನರು ಗುಣಮುಖರಾಗಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನುಳಿದ 17 ಕೋವಿಡ್ ಸೋಂಕಿತ ರೋಗಿಗಳು ಸಕ್ರಿಯ ರೋಗಿಗಳಾಗಿದ್ದು, ಪರಿಣಾಮಕಾರಿಯಾದ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ.  

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 6455 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. 1705 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 4705 ಜನರು (1 ರಿಂದ 28 ದಿನಗಳ) ರಿಪರ್ೋಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು 4 ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ. 6977 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 3224 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 3690 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯ ಡಾ. ಎಸ್.ಎ ಕಟ್ಟಿ, ಡಾ.ಲಕ್ಕಣ್ಣನವರ, ಡಾ.ಬಿರಾದಾರ ಸೇರಿದಂತೆ ಇನ್ನಿತರ ಸಿಬ್ಬಂದಿಗಳು ಇದ್ದರು.