ಕೊರೊನಾ ವಾರಿಯರ್ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ
ಕಲಬುರಗಿ, ಮೇ 23, ಕ್ವಾರಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿ ಓರ್ವ ಆಶಾ ಕಾರ್ಯಕರ್ತೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಅಬ್ಬಾಸ್ ಗ್ರಾಮದಲ್ಲಿ ನಡೆದಿದೆ.ಆಶಾ ಕಾರ್ಯಕರ್ತೆ ರೇಣುಕಾ ಕುಡಕಿ ಮೇಲೆ ಸೋಮನಾಥ್ ಕಾಂಬಳೆ ಎಂಬುವವರು ಹಲ್ಲೆ ಮಾಡಿ ಕೈ ಮುರಿದಿದ್ದಾರೆ.ಮಹಾರಾಷ್ಟ್ರದ ಮುಂಬೈನಿಂದ ವಾಪಸ್ಸಾಗಿದ್ದ ಸೋಮನಾಥ್ ಅವರನ್ನು ರೇಣುಕಾ, ಗ್ರಾಮದ ಸರ್ಕಾರಿ ಶಾಲೆಯ ಕ್ವಾರಂಟೈನ್ ಕೇಂದ್ರಕ್ಕೆ ಸೇರಿಸಿದ್ದರು. ಕ್ವಾರಂಟೈನ್ ಕೇಂದ್ರದಲ್ಲಿದ್ದ ಆತ ಊಟಕ್ಕೆ ಚಿಕನ್ ಹಾಗೂ ಮಕ್ಕಳಿಗೆ ಚಿಪ್ಸ್ ಬೇಕು ಎಂದು ಬೇಡಿಕೆ ಇಟ್ಟಿದ್ದನು. ಈ ವೇಳೆ ಆಶಾ ಕಾರ್ಯಕರ್ತೆ ರೇಣುಕಾ ಅವರು ಆಹಾರ ಸರಬರಾಜು ನನ್ನಿಂದ ಆಗುವುದಿಲ್ಲ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಸೋಮನಾಥ್, ರೇಣುಕಾ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಪರಿಣಾಮ ರೇಣುಕಾ ಅವರ ಕೈ ಮುರಿದಿದ್ದು, ಆಳಂದ ಪಟ್ಟಣದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೋಮನಾಥ್ ಹೆಂಡತಿ ಸೇರಿ ಕುಟುಂಬದ ಐವರು ಸದಸ್ಯರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 