ಬಳ್ಳಾರಿ,ಜು 02: ಕೋವಿಡ್-19 ವೈರಾಣು ಹರಡದಂತೆ ತಡೆಯಲು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಗೃಹರಕ್ಷಕ ದಳದ ಸಿಬ್ಬಂದಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸೇವೆಯು ಅತ್ಯಂತ್ಯ ಅಮೂಲ್ಯವಾಗಿದ್ದು, ಅವರ ಸೇವೆ ಶ್ಲಾಘನೀಯ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ವರಪ್ರಸಾದ್ ವಿ.ಕೆ. ಹೇಳಿದರು.
ನಗರದ ಜಿಲ್ಲಾ ಗೃಹರಕ್ಷಕದಳದ ಕಚೇರಿ ಆವರಣದಲ್ಲಿ ಜಿಲ್ಲಾ ಗೃಹರಕ್ಷಕದಳ ಮತ್ತು ಜಿಲ್ಲಾ ಆಯುಷ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಕೊವೀಡ್-19 ಭಯ ಪಡಬೇಡಿ ಏಚ್ಚರವಿರಲಿ ಎಂಬ ಕಾರ್ಯಕ್ರಮದಲ್ಲಿ ಆಯುಷ ಇಲಾಖೆಯಿಂದ ಸುಮಾರು 400 ಕ್ಕೂ ಹೆಚ್ಚು ಗೃಹರಕ್ಷಕ ಸಿಬ್ಬಂದಿಗಳಿಗೆ ಮತ್ತು ಅಧಿಕಾರಿಗಳಿಗೆ ಸಂಶಮನಿವಟಿ ಮತ್ತು ಆಸರ್ೆನಿಕ್ ಅಲ್ಬಾ ಮಾತ್ರೆಗಳನ್ನು ವಿತರಿಸಿ ಅವರು ಮಾತನಾಡಿದರು.
ಅಮೃತ ಬಳ್ಳಿಯಿಂದ ತಯಾರಿಸಿದ ಸಂಶಮನಿವಟಿ ಮತ್ತು ಆಸರ್ೆನಿಕ್ ಅಲ್ಬಾ ಮಾತ್ರೆಗಳನ್ನು ತೆಗೆದುಕೊಳ್ಳುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಕೋವಿಡ್-19 ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗೃತ ಕ್ರಮದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಪ್ರಸ್ತುತ ದಿನಗಳಲ್ಲಿ ಕರೋನಾ ವೈರಸ್ನಿಯಂತ್ರಿಸಲು ಪ್ರಪಂಚದಲ್ಲಿ ಯಾವುದೇ ಔಷಧಿ ಲಭ್ಯವಾಗಿಲ್ಲ. ಹಾಗಾಗಿ ಮಾಸ್ಕ್, ಸ್ಯಾನಿಟೈಜರ್ ಬಳಸುವುದು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಮಾದೇಷ್ಟರಾದ ಎಂ.ಎ.ಷಕೀಬ್ ಇವರು ವಹಿಸಿದ್ದರು. ಜಿಲ್ಲಾ ಆಯುಷ್ ಇಲಾಖೆಯ ಸಹಾಯಕ ಆಡಳಿತಾಧಿಕಾರಿ ಶರಣಬಸಪ್ಪ ಜಿನಗಾ, ಗೃಹರಕ್ಷಕ ಅಧಿಕಾರಿ ಜಿ.ಬಸವರಾಜು, ಜೆ.ಸುರೇಶ್, ಪ್ರಥಮ ದಜರ್ೆ ಸಹಾಯಕರಾದ ಬಿ.ಎನ್.ಗೋಪಿನಾಥ ಸೇರಿದಂತೆ ಆಯುಷ್ ಇಲಾಖೆ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳು ಇದ್ದರು.