ಗ್ರಾಪಂ ವತಿಯಿಂದ ಸಾರ್ವಜನಿಕರಿಗೆ ಕೊರೊನಾ ಜಾಗೃತಿ

ಹಾವೇರಿ03: ತಾಲೂಕಿನ ಕುರುಬಗೊಂಡ ಗ್ರಾಮದಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ ವತಿಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. 

     ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ  ಗುಡ್ಡಪ್ಪ ಮೋಟಗಿ ಮಾತನಾಡಿ, ದೇಶದಾದ್ಯಂತ ಜನರಲ್ಲಿ ಭಯದ ವಾತಾವರಣ ಮೂಡಿಸಿರುವ ಕೊರೋನಾ ವೈರಸ್ ಬಗ್ಗೆ ಪ್ರತಿಯೊಬ್ಬರೂ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮುಂದಾಗಬೇಕು ಎಂದರಲ್ಲದೆ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲೂ ಹೊರ ರಾಜ್ಯ ಹಾಗೂ ಇತರೆ ಜಿಲ್ಲೆಗಳಿಂದ ಬಂದಿರುವ ಪ್ರತಿಯೊಬ್ಬ ವ್ಯಕ್ತಿಯ ಮಾಹಿತಿಯನ್ನು ಸಂಗ್ರಹಿಸಿ ಮೇಲಾಧಿಕಾರಿಗಳ ಕಚೇರಿಗೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. 

 ಗ್ರಾಮದಲ್ಲಿ ಕರಪತ್ರಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಗ್ರಾ.ಪಂ. ಸಿಬ್ಬಂದಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.