ಬಳ್ಳಾರಿ,ಮೇ 26: ಕೋವಿಡ್-19ನಿಂದ ಜಿಲ್ಲೆಯಲ್ಲಿ ಮತ್ತೋರ್ವ ಇಂದು ಗುಣಮುಖರಾದ ಹಿನ್ನಲೆಯಲ್ಲಿ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಮಂಗಳವಾರ ಸಂಜೆ ಬಿಡುಗಡೆ ಮಾಡಲಾಯಿತು. ಇದರಿಂದಾಗಿ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ 16ಕ್ಕೇರಿದ್ದು, ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 20ಕ್ಕಿಳಿದಿದೆ.
34 ವರ್ಷದ ಪಿ-863 ಎಂಬ ಈ ವ್ಯಕ್ತಿಯು ಕಂಪ್ಲಿಯ ಮಾರುತಿನಗರ ಪ್ರದೇಶದ ನಿವಾಸಿಯಾಗಿದ್ದು, ಬೆಂಗಳೂರಿನಿಂದ ಆಗಮಿಸಿದ ಟ್ರಾವೆಲ್ ಹಿಸ್ಟರಿ ಇದೆ.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಗುಣಮುಖರಾಗಿ ಮನೆಯತ್ತ ತೆರಳಲು ಸಿದ್ದರಾಗಿ ನಿಂತಿದ್ದ ಪಿ-863 ಅವರಿಗೆ ಹೂಗುಚ್ಛ, ಹಣ್ಣು-ಹಂಪಲು ನೀಡಿ ಚಪ್ಪಾಳೆ ತಟ್ಟಿ ಅಭಿನಂದಿಸಿದರು. ನಂತರ ಅವರಿಗೆ ಕಂದಾಯ ಇಲಾಖೆ ವತಿಯಿಂದ ನೀಡಲಾಗುವ ಪಡಿತರ ಕಿಟ್ ಕಳುಹಿಸಿಕೊಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಎನ್.ಬಸರೆಡ್ಡಿ ಅವರು ಮಾತನಾಡಿ, ಇವರು ಬಂದಾಗ ಸಾಕಷ್ಟು ಭಯಭೀತರಾಗಿದ್ದರು, ಇವರಿಗೆ ಆಪ್ತ ಸಮಾಲೋಚನೆ ಮಾಡಿ ಅವರಲ್ಲಿದ್ದ ಭಯ ಹೋಗಲಾಡಿಸಿದೆವು. ಆತ್ಮ ಸ್ಥೈರ್ಯವನ್ನು ತುಂಬಿ ಅವರನ್ನು ಗುಣಮುಖರಾಗಲು ಬಹಳ ಶ್ರಮವಹಿಸಿದೆವು; ಇವರು 16 ದಿನಗಳಲ್ಲಿ ಗುಣಮುಖರಾಗಿ ಬಿಡುಗಡೆಯಾಗುತ್ತಿರುವುದು ಸಂತೋಷ ತಂದಿದೆ ಎಂದರು.ಗುಣಮುಖರಾಗಿ ಹೊರಬಂದ ಪಿ-863 ಅವರು ಮಾತನಾಡಿ, ಆಸ್ಪತ್ರೆಗೆ ದಾಖಲಾಗಿ ಬಂದಾಗಿನಿಂದ ಇಲ್ಲಿಯವರೆಗೆ ಚೆನ್ನಾಗಿ ನೋಡಿಕೊಂಡರು. ಸಮರ್ಪಕ ಚಿಕಿತ್ಸೆ ಕೊಟ್ಟರು. ಧೈರ್ಯ ತುಂಬಿದರು ಎಂದು ಹೇಳಿದ ಅವರು ವೈದ್ಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಯ ಋಣ ನಾನೆಂದು ಮರೆಯುವುದಿಲ್ಲ ಎಂದರು.ಈ ಸಂದರ್ಭದಲ್ಲಿ ಕೋವಿಡ್ ನೋಅಡಲ್ ಅಧಿಕಾರಿ ಡಾ.ಯೋಗಾನಂದರೆಡ್ಡಿ, ಆರ್.ಎಂ.ಒ ಡಾ.ಮಲ್ಲಿಕಾಜರ್ುನ, ಶುಶ್ರೂಷಾ ಅಧೀಕ್ಷಕಿ ಶಾಂತಾಬಾಯಿ, ಡಾ.ಚಿತ್ರಶೇಖರ, ಸುಧಾಕರ್, ಲ್ಯಾಬ್ ಟೆಕ್ನಿಷಿಯನ್ಸ್, ಎಕ್ಸ್-ರೇ, ಡಿ-ಗ್ರೂಪ್ ಸಿಬ್ಬಂದಿ ಸೇರಿದಂತೆ ಆಸ್ಪತ್ರೆಯ ಇತರ ಸಿಬ್ಬಂದಿಗಳು ಇದ್ದರು.